HEALTH TIPS

ಕುಂಬಳೆ ಹೆದ್ದಾರಿಯಲ್ಲಿ ಲಾರಿಗಳ ಮುಖಾಮುಖಿ ಡಿಕ್ಕಿ-ಚಾಲಕ ಗಂಭೀರ




            ಕುಂಬಳೆ: ರಾಷ್ಟ್ರೀಯ ಹೆದ್ದಾರಿ ಕುಂಬಳೆ ಸನಿಹದ ಆರಿಕ್ಕಾಡಿಯಲ್ಲಿ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಚಾಲಕ ಗಾಯಗೊಂಡಿದ್ದಾನೆ. ಟಿಪ್ಪರ್ ಲಾರಿ ಚಾಲಕ ಬಾಗಲಕೋಟೆ ನಿವಾಸಿ ಶಿವರಾಜ್(30)ಗಂಭೀರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ಯಾಸ್ ಸಾಗಾಟದ ಇನ್ನೊಂದು ಲಾರಿ ಚಾಲಕಗೆ ಸಣ್ಣಪುಟ್ಟ ಗಾಯಗಳುಂಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.
                 ಹೆದ್ದಾರಿ ಕಾಮಗಾರಿಗೆ ಜಲ್ಲಿಹುಡಿ ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಗ್ಯಾಸ್ ಸಾಗಾಟದ ಲಾರಿ ಮಧ್ಯೆ ಮಂಗಳವಾರ ಬೆಳಗ್ಗೆ ಅಪಘಾತ ಸಂಭವಿಸಿದೆ.ಎರಡೂ ಲಾರಿಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದಿಂದ ಒಂದು ತಾಸಿಗೂ ಹೆಚ್ಚುಕಾಲ ರಸ್ತೆಯಲ್ಲಿ ವಾಹನಸಂಚಾರ ಸಥಗಿತಗೊಮಡಿತ್ತು. ಕುಂಬಳೆ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries