HEALTH TIPS

ಚೆನ್ನೈ: ಗುಂಡಿ ತಪ್ಪಿಸುವ ಯತ್ನದಲ್ಲಿ ಟ್ರಕ್‌ನಡಿಗೆ ಬಿದ್ದು ಯುವತಿ ಮೃತ್ಯು

 

            ಚೆನ್ನೈ: ರಸ್ತೆ ಗುಂಡಿ ತಪ್ಪಿಸುವ ಯತ್ನದಲ್ಲಿ ತನ್ನ ವಾಹನದಿಂದ ಕೆಳಗೆ ಬಿದ್ದ 22 ವರ್ಷದ ಯುವತಿಯೊಬ್ಬಳ ಮೇಲೆ ಟ್ರಕ್‌ ಹರಿದು ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ಚೆನ್ನೈನಲ್ಲಿ ನಡೆದಿದೆ.

                 ಸಂತ್ರಸ್ತೆ ಶೋಭನಾ ಖಾಸಗಿ ಟೆಕ್ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಶೋಭನಾ ತನ್ನ ಸಹೋದರನನ್ನು ಆತನ ನೀಟ್ ಕೋಚಿಂಗ್ ಕೇಂದ್ರಕ್ಕೆ ಬಿಡಲು ಹೋಗುತ್ತಿದ್ದಳು ಎಂದು ವರದಿಯಾಗಿದೆ. ಅಪಘಾತದಿಂದ ಸಹೋದರನಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

                   ಶೋಭನಾ ಅಥವಾ ಅವರ ಸಹೋದರ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಸ್ಥಳದಿಂದ ಪರಾರಿಯಾಗಿದ್ದ ಚಾಲಕನನ್ನು ಮೋಹನ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ.

             "ಅವರಲ್ಲಿ ಯಾರೂ ಹೆಲ್ಮೆಟ್ ಧರಿಸಿರಲಿಲ್ಲ. ಟ್ರಕ್ ಚಾಲಕ, ಮೋಹನ್ ಅವರನ್ನು ಅಜಾಗರೂಕ ಚಾಲನೆ ಮತ್ತು ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಆರೋಪದ ಮೇಲೆ ಬಂಧಿಸಲಾಗಿದೆ. ನಗರಪಾಲಿಕೆ ಅಧಿಕಾರಿಗಳು ರಸ್ತೆಯ ಗುಂಡಿಗಳನ್ನು ಮುಚ್ಚಿದ್ದಾರೆ" ಎಂದು ಪೂನಮಲ್ಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries