HEALTH TIPS

ಬಹುಭಾಷಾ ನಟಿ ಜಮುನಾ ಇನ್ನಿಲ್ಲ

 

            ಹೈದರಾಬಾದ್: ಹಿರಿಯ ತೆಲುಗು ನಟಿ ಜಮುನಾ (87) ಇಂದು ಬೆಳಗ್ಗೆ ನಿಧನರಾದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

                   ಪೌರಾಣಿಕ ಪಾತ್ರಗಳ ಮೂಲಕ ಹೆಚ್ಚು ಜನಪ್ರಿಯತೆ ಪಡೆದಿದ್ದ ಜಮುನಾ ಅವರು, ದಿಗ್ಗಜ ನಟ ಎನ್.ಟಿ ರಾಮರಾವ್ ಸೇರಿದಂತೆ ಅನೇಕ ಮೆರು ನಟರೊಂದಿಗೆ ನಟಿಸಿದ್ದರು.

                     ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿಯೇ ರಂಗ ನಾಟಕಗಳಲ್ಲಿ ನಟಿಸಿದ್ದರು. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಅವರು ಮುಖ್ಯವಾಗಿ ತೆಲುಗು ಚಿತ್ರರಂಗದಲ್ಲಿ ಮನೆಮಾತಾಗಿದ್ದರು.

                  ಜಮುನಾ ಕೆಲವು ತಮಿಳು, ಕನ್ನಡ ಮತ್ತು ಹಿಂದಿ ಚಿತ್ರಗಳಲ್ಲಿಯೂ ಅಭಿನಯಿಸಿದ್ದರು. 'ಮಿಸ್ಸಮ್ಮ', 'ಗುಂಡಮ್ಮ ಕಥೆ' ಮತ್ತು 'ಶ್ರೀ ಕೃಷ್ಣ ತುಲಾಭಾರಂ' ಇವರ ಪ್ರಮುಖ ಚಿತ್ರಗಳಾಗಿವೆ. ಹಿಂದಿ ಚಲನಚಿತ್ರ ಮಿಲನ್‌ಗಾಗಿ ಫಿಲ್ಮ್‌ಫೇರ್ ಪ್ರಶಸ್ತಿ ಪಡೆದಿದ್ದರು. 1989 ರಲ್ಲಿ ಕಾಂಗ್ರೆಸ್‌ನಿಂದ ಆಂಧ್ರ ಪ್ರದೇಶದ ರಾಜಮಂಡ್ರಿಯಿಂದ ಜಮುನಾ ಅವರು ಲೋಕಸಭೆಗೆ ಆಯ್ಕೆಯಾದರು.

                  ಮಾಜಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ, ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಸೇರಿದಂತೆ ನಟರು ಹಾಗೂ ರಾಜಕಾರಣಿಗಳು ಜಮುನಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries