ಕಾಸರಗೋಡು: ಪಯಸ್ವಿನಿ ನದಿ ದಡದ ಕೊರಕ್ಕೋಡು ನಾಗರಕಟ್ಟೆಯ ಹೊನ್ನೆಮೂಲೆಯ ಶಿವಸಾನ್ನಿಧ್ಯವಿರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಶುಕ್ರವಾರ ಆರಂಭಗೊಂಡಿತು.
ಬೆಳಗ್ಗೆ ಗಣಹೋಮ, ಹಸಿರುವಾಣಿ ಸಮರ್ಪಣಾ ಮೆರವಣಿಗೆಯೊಂದಿಗೆ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಲಾಯಿತು. ಕಾಸರಗೋಡು ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಿಂದ ಹೊರಟ ಮೆರವಣಿಗೆ ಹೊನ್ನೆಮೂಲೆ ಕ್ಷೇತ್ರಕ್ಕೆ ಆಗಮಿಸಿದ ನಂತರ ಉಗ್ರಾಣ ಮುಹೂರ್ತ ನೆರವೇರಿತು. 28ರಂದು ಸಂಜೆ 6ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ಹಾಗೂ ಚಿಕ್ಕಮಗಳೂರು ವೇದವಿಜ್ಞಾನ ಮಂದಿರದ ಬ್ರಹ್ಮಶ್ರೀ ಕೆ.ಎಸ್ ನಿತ್ಯಾನಂದ ಸ್ವಾಮೀಜಿ, ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅನುಗ್ರಹ ಭಾಷಣ ಮಾಡುವರು. ಫೆ. 2ರಂದು ಬೆಳಗ್ಗೆ 8ರಿಂದ 9.10ರ ಮುಹೂರ್ತದಲ್ಲಿ ಶಿವಲಿಂಗ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ನಡೆಯಲಿರುವುದು.
ನಾಗರಕಟ್ಟೆಯ ಹೊನ್ನೆಮೂಲೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ
0
ಜನವರಿ 27, 2023
Tags


