ಕಾಸರಗೋಡು: 14ನೇ ಪಂಚವಾರ್ಷಿಕ ಯೋಜನೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ನೇತೃತ್ವದಲ್ಲಿ ನಡೆದ ಗ್ರಾಮ ಸಭೆಯನ್ನು ಶಾಸಕ ಎನ್.ಎ.ನೆಲ್ಲಿಕುನ್ನು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದರ ಅವರು, ಹವಾಮಾನ ಬದಲಾವಣೆಯು ಕೃಷಿ ಸೇರಿದಂತೆ ವಿವಿಧ ವಲಯಗಳಲ್ಲಿ ಅಸಮತೋಲನಕ್ಕೆ ಕಾರಣವಾಗುತ್ತಿದೆ. ಹವಾಮಾನ ವೈಪರೀತ್ಯಕ್ಕೆ ಅನುಗುಣವಾಗಿ ಕೃಷಿ ಹಾಗೂ ಕೃಷಿಗೆ ಸಂಬಂದಪಟ್ಟ ಕ್ಷೇತ್ರಗಳಲ್ಲಿ ನಡೆಯುವ ಅಭಿವೃದ್ಧಿ ಯೋಜನೆಗಳಲ್ಲಿಯೂ ಬದಲಾವಣೆ ತಂದುಕೊಳ್ಳುವ ಅನಿವಾರ್ಯತೆಯಿರುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಸಿ. ಎಚ್. ಕುಞಂಬು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ನೌಕರರ ಅಭಾವದಿಂದ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿದೆ. ಇದು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ಬಾಧಿಸುತ್ತಿದೆ. ಯೋಜನಾ ಕಾರ್ಯಗಳನ್ನು ಶೀಘ್ರವಾಗಿ ತಯಾರಿಸಿ ಜಾರಿಗೊಳಿಸಿದರೆ ಮಾತ್ರ ಜಿಲ್ಲೆಯಲ್ಲಿ ಅಭಿವೃದ್ಧಿಕಾರ್ಯಗಳು ವೇಗಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಕೆ. ಪ್ರದೀಪನ್, ಜಿಲ್ಲಾ ಯೋಜನಾ ಸಮಿತಿ ಉಪಾಧ್ಯಕ್ಷ ಹಾಗೂ ನವಕೇರಳ ಮಿಷನ್ ಜಿಲ್ಲಾ ಸಂಯೋಜಕ ಕೆ. ಬಾಲಕೃಷ್ಣನ್, ಯೋಜನಾ ಸಮಿತಿ ಸರ್ಕಾರಿ ನಾಮನಿರ್ದೇಶಿತ ಸಿ.ರಾಮಚಂದ್ರನ್, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಶಕುಂತಲಾ, ಗೀತಾಕೃಷ್ಣನ್, ಎಸ್.ಎನ್.ಸರಿತಾ, ಕೆ.ಶಕುಂತಳಾ, ಶಿನೋಜ್ ಚಾಕೋ, ಕಾಞಂಗಾಡು ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ. ಮಣಿಕಂದನ್, ನೀಲೇಶ್ವರಂ ಬ್ಲಾಕ್‍ಪಂಚಾಯತ್ ಅಧ್ಯಕ್ಷ ಮಾಧವನ್ ಮಣಿಯರ, ಮಂಜೇಶ್ವರಂ ಬ್ಲಾಕ್ ಪಂಚಾಯತ್ ಅಧ್ಯಕ್ಷೆ ಶಮೀನಾ ಟೀಚರ್, ಜಿಲ್ಲಾ ಪಂಚಾಯಿತಿ ಸದಸ್ಯರು, ವಿವಿಧ ಸ್ಥಳೀಯಾಡಳಿತ ಸಂಸ್ಥೆ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು.
ಹವಾಮಾನ ವೈಪರೀತ್ಯ-ಅಭಿವೃದ್ಧಿ ಯೋಜನೆಗಳಲ್ಲೂ ಬದಲಾವಣೆ ಅನಿವಾರ್ಯ: ಶಾಸಕ ಎನ್. ಎ. ನೆಲ್ಲಿಕುನ್ನು
0
ಜನವರಿ 19, 2023
Tags


