ಕಾಸರಗೋಡು: ಎಂಡೋಸಲ್ಫಾನ್ ಸಂತ್ರಸ್ತರ ವಿವಿಧ ಸಮಸ್ಯೆಗಳನ್ನು ಸಕಾಲದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಮಹಮ್ಮದ್ ರಿಯಾಸ್ ತಿಳಿಸಿದ್ದಾರೆ.
ಕಾಸರಗೋಡು ಕಲೆಕ್ಟರೇಟ್‍ನಲ್ಲಿ ನಡೆದ ಎಂಡೋಸಲ್ಫಾನ್ ಸೆಲ್ ಸಭೆಯ ಬಳಿಕ ಸಚಿವರು ಈ ಮಾಹಿತಿ ನೀಡಿದರು. ಕಳೆದ ವರ್ಷ ನ.31ರಂದು ಆರೋಗ್ಯ ಮತ್ತು ಸಾಮಾಜಿಕ ನ್ಯಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮತ್ತು ಬಂದರು ಖಾತೆ ಸಚಿವರು ನಡೆಸಿದ ಸಭೆಯಲ್ಲಿ ಕೈಗೊಂಡ ತೀರ್ಮಾನಗಳನ್ನು ತ್ವರಿತವಾಗಿ ಜಾರಿಗೊಳಿಸಲಾಗುವುದು. ಆ ಸಭೆಯ ನಿರ್ಣಯದಿಂದಎಂಡೋಸಲ್ಫಾನ್ ಸಂತ್ರಸ್ತರನ್ನು ಗುರುತಿಸುವ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಲು ಪ್ರಾಥಮಿಕ ಹಂತವಾಗಿ ಡಿಸೆಂಬರ್ 7 ರಿಂದ 31 ರವರೆಗೆ ವಿವಿಧ ಆರೋಗ್ಯ ಕೇಂದ್ರಗಳ ಮೂಲಕ 20427 ಅರ್ಜಿಗಳು ಸಲ್ಲಿಕೆಯಾಗಿದೆ. ಈ ಅರ್ಜಿಗಳ ಅವಲೋಕನ ನಡೆಸಲು ವಿಶೇಷ ವೈದ್ಯಕೀಯ ತಂಡವನ್ನು ನೇಮಿಸಿ ಆರೋಗ್ಯ ಸಚಿವರೊಂದಿಗೆ ಚರ್ಚಿಸಲಾಗುವುದು. ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಯಾ ಇಲಾಖೆಗಳ ಸಚಿವರೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಎಂಡೋಸಲ್ಫಾನ್ ಸಂತ್ರಸ್ತರ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ-ಸಚಿವ ಮಹಮ್ಮದ್ ರಿಯಾಸ್
0
ಜನವರಿ 09, 2023
Tags





