ಕಾಸರಗೋಡು : ಸ್ವಾಮಿ ವಿವೇಕಾನಂದ ಅವರ ಜನ್ಮ ದಿನದನ್ವಯ ಆಚರಿಸಲಾಗುತ್ತಿರುವ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಜಿಲ್ಲಾ ಯುವ ಕೇಂದ್ರ ಹಾಗೂ ನೆಹರು ಕಲಾ ಮತ್ತು ವಿಜ್ಞಾನ ಕಾಲೇಜಿನ ಎನ್ನೆಸ್ಸೆಸ್ ವಿಭಾಗದ ಆಶ್ರಯದಲ್ಲಿ ಕೇರಳ ರಾಜ್ಯ ಯುವ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.
ನೆಹರು ಕಲಾ ಮತ್ತು ವಿಜ್ಞಾನ ಕಾಲೇಜಿನ ಯುವ ಬರಹಗಾರ ಅನೀಶ್ ವೆಂಕಟ್ ಸಮಾರಂಭ ಉದ್ಘಾಟಿಸಿ, ಯುವ ಸಮಾಜ ಮತ್ತು ನವೋದಯ ಕೇರಳ ಕುರಿತು ಉಪನ್ಯಾಸ ನಡೆಸಿಕೊಟ್ಟರು. ನೆಹರೂ ಕಾಲೇಜು ಪ್ರಾಂಶುಪಾಲ ಡಾ.ಕೆ.ವಿ.ಮುರಳಿ ಅಧ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ಕಾರ್ಯದರ್ಶಿಗಳಾದ ಮುಬಾಶಿರಾ, ಅನಾಮಿಕಾ, ನಂದನಾ, ಪ್ರಥಮೇಶ್ ಉಪಸ್ಥಿತರಿದ್ದರು. ನೆಹರು ಕಾಲೇಜಿನ ಎ£ನ್ನೆಸ್ಸೆಸ್ ಯೋಜನಾಧಿಕಾರಿ ವಿ.ವಿಜಯಕುಮಾರ್ ಸ್ವಾಗತಿಸಿದರು. ಯುವ ಕಲ್ಯಾಣ ಮಂಡಳಿ ಜಿಲ್ಲಾ ಯುವ ಸಮನ್ವಯಾಧಿಕಾರಿ ಎ.ವಿ.ಶಿವಪ್ರಸಾದ್ ವಂದಿಸಿದರು. ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.
ನೆಹರು ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
0
ಜನವರಿ 12, 2023
Tags





