HEALTH TIPS

ಮಾವಿನ ಹಣ್ಣುಗಳನ್ನು ಕದ್ದು ಸಸ್ಪೆಂಡ್​ ಆಗಿರುವ ಪೊಲೀಸ್​ ಅಧಿಕಾರಿಗೆ ಎದುರಾಯ್ತು ಭಾರೀ ಸಂಕಷ್ಟ! 15 ದಿನ ಡೆಡ್​ಲೈನ್​

 

            ಕೊಟ್ಟಾಯಂ: ಕೇರಳದ ಕಂಜಿರಪಲ್ಲಿಯ ಅಂಗಡಿಯೊಂದರಲ್ಲಿ ಮಾವಿನ ಹಣ್ಣುಗಳನ್ನು ಕಳ್ಳತನ ಮಾಡಿ, ಅಮಾನತು ಶಿಕ್ಷೆಗೆ ಗುರಿಯಾಗಿದ್ದ ಪೊಲೀಸ್​ ಅಧಿಕಾರಿಗೆ ಈಗ ಭಾರೀ ಆಘಾತವೊಂದು ಎದುರಾಗಿದೆ. ಸೇವೆಯಿಂದಲೇ ವಜಾಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

                 ಶಿಹಾಬ್ ಅಮಾನತಾಗಿರುವ ಅಧಿಕಾರಿ. ಇಡುಕ್ಕಿಯಲ್ಲಿರುವ ಎಆರ್​ ಕ್ಯಾಂಪ್​ನಲ್ಲಿ ಸಿವಿಲ್​ ಪೊಲೀಸ್​ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿಹಾಬ್​ಗೆ ಇದೀಗ ಶೋಕಾಸ್​ ನೋಟಿಸ್​ ಕಳುಹಿಸಲಾಗಿದ್ದು, ಸೇವೆಯಿಂದ ಯಾಕೆ ವಜಾ ಮಾಡಬಾರದು ಎಂಬುದಕ್ಕೆ ವಿವರಣೆ ನೀಡುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ. ಡಿಜಿಪಿ ನಿರ್ದೇಶನದಂತೆ ನೋಟಿಸ್​ ಕಳುಹಿಸಲಾಗಿದ್ದು, 15 ದಿನಗಳ ಒಳಗೆ ವಿವರಣೆ ನೀಡಬೇಕಿದೆ. ಸರಿಯಾದ ವಿವರಣೆ ನೀಡದೇ ಇದ್ದಲ್ಲಿ ಕೆಲಸದಿಂದ ವಜಾಗೊಳ್ಳುವುದು ಖಚಿತವಾಗಿದೆ.

                 ಶಿಹಾಬ್​, ಕಳೆದ ವರ್ಷ ಸೆ.30ರಂದು ಕಂಜಿರಪಲ್ಲಿಯ ಹಣ್ಣಿನ ಅಂಗಡಿಗೆ ನುಗ್ಗಿ ಮಾವಿನ ಹಣ್ಣುಗಳನ್ನು ಕಳವು ಮಾಡಿದ್ದರು. ಕೆಜಿಗೆ 600 ರೂ.ಮೌಲ್ಯದ ಸುಮಾರು 10 ಕೆಜಿ ಮಾವಿನ ಹಣ್ಣನ್ನು ಶಿಹಾಬ್ ಕದ್ದಿದ್ದರು. ಘಟನೆ ನಡೆದ ಸ್ಥಳದ ಸಿಸಿಟಿವಿ ದೃಶ್ಯಾವಳಿಯಿಂದ ಈ ಪ್ರಕರಣ ಬೆಳಕಿಗೆ ಬಂದಿತು. ಇದಾದ ಬಳಿಕ ಅಕ್ಟೋಬರ್ 3 ರಂದು ಕೇರಳ ಡಿಜಿಪಿ, ಆರೋಪಿ ಶಿಹಾಬ್​ನನ್ನು ಅಮಾನತುಗೊಳಿಸಿದರು.

                    ಶಿಹಾಬ್​ ಅಪರಾಧ ಹಿನ್ನೆಲೆಯನ್ನು ಸಹ ಹೊಂದಿದ್ದಾರೆ. 2019ರಲ್ಲಿ ಕಂಜಿರಪಲ್ಲಿಯ ಜನರಲ್ ಹಾಸ್ಪಿಟಲ್​ನ ಮಹಿಳಾ ಉದ್ಯೋಗಿಯೊಬ್ಬರಿಗೆ ಮದುವೆ ಆಗುವುದಾಗಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪವಿದೆ. ಅಲ್ಲದೆ, ಜೈಲಿನಿಂದ ಹೊರಬಂದ ನಂತರ ಮಹಿಳೆಗೆ ಬೆದರಿಕೆ ಮತ್ತು ಹಲ್ಲೆಗೆ ಯತ್ನಿಸಿದ ಶಿಹಾಬ್ ವಿರುದ್ಧ ಮುಂಡಕ್ಕಯಂ ಪೊಲೀಸರು ದಾಖಲಿಸಿರುವ ಮತ್ತೊಂದು ಪ್ರಕರಣದ ವಿಚಾರಣೆ ನಡೆಯುತ್ತಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries