ಕಾಸರಗೋಡು: ರಾಜ್ಯ ಬಜೆಟ್‍ನಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹಣ ಮೀಸಲಿಡಲಾಗಿದ್ದು, ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್, ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ, ಕಾಸರಗೋಡು ಏರ್‍ಸ್ಟ್ರಿಪ್, ಬೇಕಲ ಪ್ರವಾಸೋದ್ಯಮ ಅಭಿವೃದ್ಧಿ, ಹೊಸ ಸೇತುವೆಗಳು, ರಸ್ತೆಗಳು ಮತ್ತು ಟಾಟಾ ಆಸ್ಪತ್ರೆಯನ್ನು ಬಜೆಟ್‍ನಲ್ಲಿ ಸೇರಿಸಲಾಗಿದೆ. ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‍ಗೆ 75 ಕೋಟಿ ರೂ ಪಾಯಿ ಮೀಸಲಿರಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರಿಗೆ ಸಾಮಾಜಿಕ ಭದ್ರತಾ ಮಿಷನ್ ಪುನರ್ವಸತಿ ಚಟುವಟಿಕೆಗಳಿಗೆ 17 ಕೋಟಿ ರೂ ಪಾಯಿಗಳ ಸಮಗ್ರ ಪ್ಯಾಕೇಜ್‍ನೊಂದಿಗೆ ಜಿಲ್ಲೆಯಲ್ಲಿ ಹೊಸ ವೃತ್ತಿ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು. ಟಾಟಾ ಟ್ರಸ್ಟ್ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ಚಿಕಿತ್ಸಾ ಸೌಲಭ್ಯಗಳನ್ನು ಹೆಚ್ಚಿಸುವುದರ ಜತೆಗೆ ಪ್ರೀ ಫ್ಯಾಬ್ ತಂತ್ರಜ್ಞಾನ ಬಳಸಿ ಕಾಸರಗೋಡು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ನಿರ್ಮಾಣಗೊಳ್ಳಳಿದೆ. ಜಿಲ್ಲೆಯಲ್ಲಿ ಸಾಕು ಪ್ರಾಣಿ ಆಹಾರದ ಕಾರ್ಖಾನೆ ಸ್ಥಾಪಿಸಲಾಗುವುದು. ಕೊಲ್ಲಂ ಮತ್ತು ಕಾಸರಗೋಡಿನಲ್ಲಿ ಕಾರ್ಖಾನೆ ಸ್ಥಾಪಿಸಲು ನಾಲ್ಕು ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದೆ.
ಕೊಬ್ಬರಿ ಸಂಗ್ರಹಕ್ಕಾಗಿ ಬೆಂಬಲ ಬೆಲೆಯಲ್ಲಿ ಎರಡು ರೂಪಾಯಿ ಹೆಚ್ಚಿಸಲಾಗಿದೆ. ಬೇಕಲ ಒಳಗೊಂಡಿರುವ ರಾಜ್ಯದ ಮನರಂಜನೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ 50 ಕೋಟಿ ಮೀಸಲಿಡಲಾಗಿದೆ. ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏರ್ ಸ್ಟ್ರಿಪ್‍ಗಳಿಗಾಗಿ ಪ್ರತ್ಯೇಕ ತರದ ಕಂಪೆನಿಯನ್ನು ರಚಿಸಲಾಗುವುದು. ಇದಕ್ಕಾಗಿ 20 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಜಿಲೆಯಲ್ಲಿ ಪಾರಂಪರಿಕ ವಸ್ತು ಸಂಗ್ರಹಾಲಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ವಿವಿಧ ಜಿಲ್ಲೆಗಳಲ್ಲಿ ಪಾರಂಪರಿಕ ವಸ್ತು ಸಂಗ್ರಹಾಲಯಗಳನ್ನು ಸ್ಥಾಪಿಸಲು 5.50 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲು ಬಜೆಟ್‍ನಲ್ಲಿ ಹಣವನ್ನೂ ಮೀಸಲಿಡಲಾಗಿದೆ. ಜಿಲ್ಲಾಧಿಕಾರಿ ಕಛೇರಿಯಲ್ಲಿ ಸ್ಟೇಟ್ ಚೇಂಬರ್ ಸ್ಥಾಪಿಸಲಾಗುವುದು. ಇದಕ್ಕಾಗಿ ರಾಜ್ಯದ ವಿವಿಧ ಜಿಲ್ಲೆಗಳಿಗಾಗಿ 70 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ.
ರಾಜ್ಯ ಬಜೆಟ್-ಅಭಿವೃದ್ಧಿ ಪ್ಯಾಕೇಜ್, ಎಂಡೋಸಲ್ಫಾನ್ ಸಂತ್ರಸ್ತರಿಗೆ 17 ಕೋಟಿ ರೂ
0
ಫೆಬ್ರವರಿ 04, 2023
Tags




