HEALTH TIPS

ಕೇರಳ ಸಿಎಂರ ಮಾಜಿ ಪ್ರಧಾನ ಕಾರ್ಯದರ್ಶಿ ಶಿವಶಂಕರ್‌ 5 ದಿನ ಇಡಿ ಕಸ್ಟಡಿಗೆ

     ತಿರುವನಂತಪುರ: ಯುಎಇ ಮೂಲದ ಕಂಪನಿ ಪ್ರಾಯೋಜಿತ ವಸತಿ ಯೋಜನೆಯೊಂದರ ಅಕ್ರಮಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಅವರನ್ನು ಕೋಲ್ಕತ್ತ ನ್ಯಾಯಾಲಯವು 5 ದಿನಗಳ ಕಾಲ (ಫೆ.20ರ ವರೆಗೆ) ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಗೆ ನೀಡಿದೆ.

      ಕಳೆದ ತಿಂಗಳು ಸೇವೆಯಿಂದ ನಿವೃತ್ತರಾಗಿರುವ ಶಿವಶಂಕರ್ ಅವರನ್ನು ಈ ಹಿಂದೆಯೂ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದರು. ಮೂರು ತಿಂಗಳಿಗೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದರು.

    ವಸತಿ ಯೋಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್ ಅವರನ್ನು ಕಳೆದ ಎರಡು ದಿನಗಳಿಂದ ಕೊಚ್ಚಿಯಲ್ಲಿ ಇ.ಡಿ ವಿಚಾರಣೆ ನಡೆಸುತ್ತಿತ್ತು. ಮಂಗಳವಾರ ತಡರಾತ್ರಿ ಅವರನ್ನು ಬಂಧಿಸಲಾಗಿದೆ. ಇಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

     ತ್ರಿಶೂರ್ ಜಿಲ್ಲೆಯ ವಡಕ್ಕಂಚೇರಿಯಲ್ಲಿ ವಸತಿ ಯೋಜನೆಯನ್ನು ಖಾಸಗಿ ಸಂಸ್ಥೆ ಯುನಿಟಾಕ್‌ಗೆ ನೀಡಲು ಶಿವಶಂಕರ್ ಲಂಚ ಪಡೆದಿದ್ದಾರೆ ಎಂಬ ಆರೋಪವಿದೆ.

     ₹4 ಕೋಟಿಗೂ ಅಧಿಕ ಹಣವನ್ನು ವಿವಿಧ ವ್ಯಕ್ತಿಗಳಿಗೆ ಕಮಿಷನ್ ನೀಡಿರುವುದಾಗಿ ಕಂಪನಿ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದರು. ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರ ಬ್ಯಾಂಕ್ ಲಾಕರ್‌ನಿಂದ ವಶಪಡಿಸಿಕೊಂಡ ಸುಮಾರು ₹1 ಕೋಟಿ ಹಣ ಶಿವಶಂಕರ್ ಕಮಿಷನ್ ಪಡೆದಿರುವ ಹಣವಿರಬಹುದು ಎಂದು ಶಂಕಿಸಲಾಗಿದೆ.

     ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ಅಕ್ಟೋಬರ್‌ನಲ್ಲಿ ಶಿವಶಂಕರ್ ಅವರನ್ನು ಇ.ಡಿ ಬಂಧಿಸಿತ್ತು. ಆರೋಪ ಬಂದಾಗ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಜಾಮೀನು ಪಡೆದ ನಂತರ ಮತ್ತ ಸೇವೆಗೆ ಮರುಸೇರ್ಪಡೆ ಮಾಡಲಾಗಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries