ವಯನಾಡು: ಕೋಯಿಕ್ಕೋಡ್ ಮೆಡಿಕಲ್ ಕಾಲೇಜು ಬಳಿ ಇತ್ತೀಚೆಗೆ ಶವವಾಗಿ ಪತ್ತೆಯಾಗಿದ್ದ ಆದಿವಾಸಿ ಕುಟುಂಬದ ವ್ಯಕ್ತಿಯೊಬ್ಬರ ಮನೆಗೆ ವಯನಾಡು ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಸೋಮವಾರ ಭೇಟಿ ನೀಡಿದರು.
ಇದೇ 11ರಂದು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಬಳಿ ವಿಶ್ವನಾಥನ್ (46) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.