HEALTH TIPS

ವರಾಹರೂಪಂ ವಿವಾದ: ಕೇರಳ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿ!

 

           ಕೋಯಿಕೋಡ್: ಕೆಜಿಎಎಫ್ 2 ಬಳಿಕ ಕನ್ನಡ ಚಿತ್ರರಂಗದಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ ಕಾಂತಾರ ಚಿತ್ರದ ವರಾಹರೂಪಂ ಹಾಡಿನ ಮೇಲೆ ಕೇರಳದ ತೈಕುಡಮ್ ಬ್ರಿಡ್ಜ್ ಆಲ್ಬಂ ಬ್ಯಾಂಡ್ ಕೃತಿಚೌರ್ಯ ಆರೋಪ ಮಾಡಿದ್ದು ಈ ಸಂಬಂಧ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ ಕಿರಗಂದೂರು ಕೇರಳ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. 

              ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೇರಳ ಪೊಲೀಸರು ನೋಟಿಸ್ ನೀಡಿದ್ದು ಈ ಹಿನ್ನೆಲೆಯಲ್ಲಿ ರಿಷಬ್ ಮತ್ತು ವಿಜಯ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತನಿಖಾಧಿಕಾರಿ ಡಿಸಿಪಿ ಕೆಇ ಬೈಜು ತಿಳಿಸಿದ್ದಾರೆ.

             2015ರಲ್ಲಿ ಕೇರಳದಲ್ಲಿ ಬಿಡುಗಡೆಯಾಗಿದ್ದ ತೈಕುಡಮ್ ಬ್ರಿಡ್ಜ್ ಆಲ್ಬಂ ಬ್ಯಾಂಡ್ ನ ನವರಸದ ನಕಲು ಎಂದು ಆರೋಪಿಸಿತ್ತು. ಅಲ್ಲದೆ ಕೃತಿಚೌರ್ಯ ಆರೋಪದಡಿ ನಿರ್ದೇಶಕ ಮತ್ತು ನಿರ್ಮಾಪಕರನ್ನು ಬಂಧಿಸಬೇಕು ಎಂದು ಪ್ರಕರಣ ದಾಖಲಿಸಿತ್ತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries