ಕುಂಬಳೆ: ಪುತ್ತಿಗೆ ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಿವರಾತ್ರಿ ಮಹೋತ್ಸವದ ಸಂದಭರ್À ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಭೇಟಿ ನೀಡಿ ಆಶೀರ್ವಚನ ನೀಡಿದರು.
ಸ್ವಾಮೀಜಿಯವರನ್ನು ಶ್ರೀ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಪುತ್ತಿಗೆ ಗ್ರಾಮಪಂಚಾಯಿತಿ ಅಧ್ಯಕ್ಷ ಡಿ ಸುಬ್ರಹ್ಮಣ್ಯ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಶ್ಯಾಮ ಹೊಳ್ಳ, ಅಮರನಾಥ ರೈ ಮೊದಲಾದವರು ಉಪಸ್ಥಿತರಿದ್ದರು. ಕ್ಷೇತ್ರ ಸೇವಾಸಮಿತಿ ಅಧ್ಯಕ್ಷ ಡಿ ದಾಮೋದರನ್ ಸ್ವಾಗತಿಸಿ, ಕಾರ್ಯದರ್ಶಿ ಕೇಶವ ಡಿ. ವಂದಿಸಿದರು. ರಾಜೇಂದ್ರ ರೈ ಕಾರ್ಯಕ್ರಮ ನಿರೂಪಿಸಿದರು.
ದೇಲಂಪಾಡಿ ಕ್ಷೇತ್ರದಲ್ಲಿ ಕೊಂಡೆವೂರು ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ
0
ಫೆಬ್ರವರಿ 22, 2023
Tags

.jpg)
