HEALTH TIPS

ಮಹಿಳೆಯರಿಗೆ ಹೊಸ ಉಳಿತಾಯ ಯೋಜನೆ ಘೋಷಣೆ

 

                ನವದೆಹಲಿ: ಎರಡು ವರ್ಷಗಳ ಕಾಲ ಶೇ 7.5ರಷ್ಟು ಸ್ಥಿರಬಡ್ಡಿಯೊಂದಿಗೆ ಮಹಿಳೆಯರಿಗಾಗಿ 'ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ' ಎನ್ನುವ ಹೊಸ ಉಳಿತಾಯ ಯೋಜನೆಯನ್ನು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಮಹಿಳೆ ಅಥವಾ ಹೆಣ್ಣು ಮಗುವಿನ ಹೆಸರಿನಲ್ಲಿ ಈ ಯೋಜನೆಯಲ್ಲಿ ಗರಿಷ್ಠ ₹ 2 ಲಕ್ಷ ಮೊತ್ತದ ಹಣವನ್ನು ಠೇವಣಿಯಾಗಿ ಇರಿಸಬಹುದು. ಭಾಗಶಃ ಹಿಂಪಡೆಯುವ ಸೌಲಭ್ಯವೂ ಯೋಜನೆಯಲ್ಲಿದೆ.

                      'ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ದೀನ್‌ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಜೀವನೋಪಾಯ ಮಿಷನ್ ಅಡಿಯಲ್ಲಿ 81 ಲಕ್ಷ ಸ್ವ-ಸಹಾಯ ಮಹಿಳಾ ಗುಂಪುಗಳನ್ನು ರಚಿಸಲಾಗಿದೆ. ಹಲವು ಸಾವಿರ ಸದಸ್ಯರನ್ನು ಹೊಂದಿರುವ ದೊಡ್ಡ ಉತ್ಪಾದಕ ಉದ್ಯಮಗಳು ಅಥವಾ ಸಮೂಹಗಳ ರಚನೆಯ ಮೂಲಕ ಈ ಗುಂಪುಗಳನ್ನು ಆರ್ಥಿಕ ಸಬಲೀಕರಣದ ಮುಂದಿನ ಹಂತವನ್ನು ತಲುಪಲು ಸಕ್ರಿಯಗೊಳಿಸಲಾಗುವುದು' ಎಂದು ನಿರ್ಮಲಾ ಹೇಳಿದ್ದಾರೆ.

                 'ಪಿಎಂ-ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಸಣ್ಣ ರೈತರಿಗೆ ₹ 2.25 ಲಕ್ಷ ಕೋಟಿಗೂ ಹೆಚ್ಚು ಆರ್ಥಿಕ ನೆರವು ನೀಡಲಾಗಿದೆ. ಈ ಯೋಜನೆಯಡಿ ಸುಮಾರು 3 ಕೋಟಿ ಮಹಿಳಾ ರೈತರಿಗೆ ₹ 54 ಸಾವಿರ ಕೋಟಿ ಒದಗಿಸಲಾಗಿದೆ' ಎಂದೂ ಅವರು ತಿಳಿಸಿದ್ದಾರೆ.

ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಮಿತಿಯನ್ನು ₹15 ಲಕ್ಷದಿಂದ ₹30ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಮಾಸಿಕ ಆದಾಯ ಯೋಜನೆಯ ಗರಿಷ್ಠ ಠೇವಣಿ ಮಿತಿಯನ್ನು ₹4.5 ಲಕ್ಷದಿಂದ ₹9 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಜಂಟಿ ಖಾತೆಯ ಮಿತಿ ₹9 ಲಕ್ಷದಿಂದ ₹15 ಲಕ್ಷಕ್ಕೆ ಹೆಚ್ಚಿಸಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries