ಕುಂಬಳೆ: ಪುತ್ತಿಗೆ ದೇಲಂಪಾಡಿ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವವು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು. ಇದರ ಅಂಗವಾಗಿ ಜರಗಿದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರ ಆಡಳಿತ ಮೊಕ್ತೇಸರ ಹಾಗೂ ಹಿರಿಯ ನ್ಯಾಯವಾದಿ ಸುಬ್ಬಯ್ಯ ರೈ ಅಧ್ಯಕ್ಷತೆ ವಹಿಸಿದ್ದರು. ವೇದಮೂರ್ತಿ ಹರಿನಾರಾಯಣ ಮಯ್ಯ ಕುಂಬಳೆ ಧಾರ್ಮಿಕ ಉಪನ್ಯಾಸವನ್ನು ನೀಡಿ ದೇವರು ನಮಗೆ ನೀಡಿದ ಸಂಪತ್ತನ್ನು ಸತ್ಕಾರ್ಯಗಳಿಗೆ ಬಳಸಿದರೆ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಬಹುದು ಎಂದರು.
ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮನಾಥ ಪೈ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಮಾತನಾಡಿದರು. ಪುತ್ತಿಗೆ ಗ್ರಾಮಪಂಚಾಯಿತಿ ಅಧ್ಯಕ್ಷ ಡಿ ಸುಬ್ಬಣ್ಣ ಆಳ್ವ, ವಾರ್ಡು ಸದಸ್ಯೆ ಪ್ರೇಮಾ ಎಸ್ ರೈ, ಎಂ.ಎನ್. ಮಯ್ಯ ಮಾತನಾಡಿದರು. ಶ್ಯಾಮರಾಯ ಹೊಳ್ಳ, ಆನಂದ ಎಂ ಕೆ, ಕೇಶವ ಡಿ, ತಿಮ್ಮಣ ರೈ ನೈಮೊಗರು, ಅಮರನಾಥ ರೈ ಚೀಂಕಣಮೊಗರು ಉಪಸ್ಥಿತರಿದ್ದರು. ಇದೇ ವೇಳೆ ಧಾರ್ಮಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ ವೇದಮೂರ್ತಿ ಹರಿನಾರಾಯಣ ಮಯ್ಯ ಇವರನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು. ಸೇವಾಸಮಿತಿ ಅಧ್ಯಕ್ಷ ಡಿ ದಾಮೋದರನ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಡಿ. ಎನ್. ರಾಧಾಕೃಷ್ಣ ವಂದಿಸಿದರು. ಡಿ ರಾಜೇಂದ್ರ ರೈ ಕಾರ್ಯಕ್ರಮ ನಿರೂಪಿಸಿದರು.
ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಧಾರ್ಮಿಕ ಸಭೆ
0
ಫೆಬ್ರವರಿ 22, 2023
Tags

.jpg)
