HEALTH TIPS

ಇಂದಿನಿಂದ ಶಾಂತಿಪಳಿಕೆ ಶ್ರೀ ಮಹಾಮ್ಮಾಯ ದೇವಸ್ಥಾನದಲ್ಲಿ ಪುನ:ಪ್ರತಿಷ್ಠಾ ಬ್ರಹ್ಮಕಲಶೋತ್ಸವ

 
 

          ಕಾಸರಗೋಡು: ಕುಂಬಳೆ ಸೀಮೆಯ ವರ್ಕಾಡಿ-ನರಿಂಗಾನ ಗ್ರಾಮದ ಶಾಂತಿಪಳಿಕೆ ಶ್ರೀ ಮಹಾಮ್ಮಾಯ ದೇವಸ್ಥಾನದ ಪುನ: ಪ್ರತಿಷ್ಠಾ  ಬ್ರಹ್ಮಕಲಶೋತ್ಸವ ಫೆ. 23ರಿಂದ 27ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ (ಬಾಬ) ಭಂಡಾರಮನೆ ಸುದ್ದಿಗೊಷ್ಠಿಯಲ್ಲಿ ತಿಳಿಸಿದ್ದಾರೆ.
            23ರಂದು ಸಂಜೆ 3ಕ್ಕೆ ಮುಡಿಪು ಶ್ರೀ ಮುಡಿಪಿನ್ನಾರ್ ದೈವಸ್ಥಾನದಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ ಹೊರಡಲಿದ್ದು ಪುಣ್ಯಕೋಟಿ ನಗರ, ಕೈರಂಗಳ, ಮೋಂಟುಗೋಳಿ ಮಾರ್ಗವಾಗಿ ತೌಡುಗೋಳಿ ಕ್ರಾಸ್ ನಿಂದ ತೌಡುಗೋಳಿ, ಕೂಟತ್ತಜೆ, ಪಾವುಲ, ಸಾರಂಗಪಾಣಿ ದೇವಸ್ಥಾನದಿಂದ ಹೊರಟು ಸುಂಕದಕಟ್ಟೆ, ಬೇಕರಿ ಜಂಕ್ಷನ್ ಕಾವೀ ಸುಬ್ರಹ್ಮಣ್ಯ ದೇವಸ್ಥಾನ ದಾರಿಯಾಗಿ ತೌಡುಗೋಳಿಗೆ ಹಾಗೂ ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಹೊರಡುವ ಇನ್ನೊಂದು ಮೆರವಣಿಗೆ  ನೆತ್ತಿಲ ಶ್ರೀ ಕೃಷ್ಣ ಮಂದಿರ ದಾರಿಯಾಗಿ ದೇವಂದಪಡ್ಪು ಶ್ರೀ ಮಹಾವಿಷ್ಣು ದೇವಸ್ಥಾನ ದಾರಿಯಾಗಿ ತೌಡುಗೊಳಿಗೆ ತಲುಪಿ ಅಲ್ಲಿಂದ ಶ್ರೀ ಕ್ಷೇತ್ರಕ್ಕೆ ತಲುಪಲಿದೆ. ಅಂದು ಸಂಜೆ 6ಕ್ಕೆ  ಅದೇ ದಿನ ಸಂಜೆ 6ಕ್ಕೆ,  ಫೆ. 24, 25, 26ರಂದು ಸಂಜೆ 7ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.
           ಫೆ. 23ರಂದು ಶ್ರೀ ಕ್ಷೇತ್ರ ಕಟೀಲಿನ ಧರ್ಮದರ್ಶಿ ಅನಂತ ಪದ್ಮನಾಭ ಆಸ್ರಣ್ಣ ಮತ್ತು ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣ,  ಫೆ. 24ರಂದು ಧಾರ್ಮಿಕ ಮುಖಂಡ ಕುಂಟಾರು ರವೀಶ್ ತಂತ್ರಿ, ಫೆ. 25ರಂದು ಕರ್ನಾಟಕ ದಕ್ಷಿಣ ಪ್ರಾಂತ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಪ್ರಶಿಕ್ಷಣ ಪ್ರಮುಖ್ ರಾಧಾಕೃಷ್ಣ ಅಡ್ಯಂತಾಯ, ಫೆ. 27ರಂದು ಶ್ರೀಕಾಂತ್ ಶೆಟ್ಟಿ ಕಾರ್ಕಳ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.  
              ಫೆ. 26ರಂದು ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸುವರು. ಕಾಸರಗೋಡು ಜಿಲ್ಲಾ ವಿಶ್ವಹಿಂದೂ ಪರಿಷತ್ ಉಪಾಧ್ಯಕ್ಷೆ ಮೀರಾ ಆಳ್ವ ಧಾರ್ಮಿಕ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ, ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
              ಸುದ್ದಿಗೋಷ್ಟಿಯಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಪ್ರಸನ್ನ ಪಕ್ಕಳ ಬಲೆತ್ತೋಡು, ಮೊಕ್ತೇಸರ ಬಿ.ಎನ್.ಶೆಟ್ಟಿ ಬಲೆತ್ತೋಡು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸತೀಶ್ ಕುಂಪಲ,  ಹೊರೆಕಾಣಿಕೆ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ಕೂವೆತ್ತಬೈಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮಣ್ಣ ಶೆಟ್ಟಿ ಆಳ್ವರಬೆಟ್ಟು ಹಾಗೂ ಪ್ರಧಾನ ಸಂಚಾಲಕ ಹರೀಶ್ ಕನ್ನಿಗುಳಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ್ ಸರ್ಕುಡೇಲು ಉಪಸ್ಥಿತರಿದ್ದರು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries