ಕಾಸರಗೋಡು: ಕೇರಳದ ಕೇಂದ್ರೀಯ ವಿಶ್ವವಿದ್ಯಾನಿಲಯದ ಬಯೋಕೆಮಿಸ್ಟ್ರಿ ಮತ್ತು ಮಾಲಿಕ್ಯುಲರ್ ಬಯಾಲಜಿ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಕೆ.ಎಸ್. ಅಶ್ವತಿ ಅವರಿಗೆ ಅಂತಾರಾಷ್ಟ್ರೀಯ ಸಂಶೋಧನಾ ಫೆಲೋಶಿಪ್ ಲಭಿಸಿದೆ.
ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಧೀನದಲ್ಲಿರುವ ಸಯನ್ಸ್ ಏಂಡ್ ಇಂಜಿನಿಯರಿಂಗ್ ರಿಸರ್ಚ್ ಬೋರ್ಡ್(ಎಸ್‍ಇಆರ್‍ಬಿ)ಹಾಗೂ ಅಮೆರಿಕಾದ ಪಡ್ರ್ಯೂ ವಿಶ್ವವಿದ್ಯಾಲಯ ಜಂಟಿಯಾಗಿ ನೀಡುವ ಓವರ್‍ಸೀಸ್ ಡಾಕ್ಟರಲ್ ಫೆಲೋಶಿಪ್‍ಗೆ ಕೆ.ಎಸ್ ಅಶ್ವತಿ ಆಯ್ಕೆಯಾಗಿದ್ದಾರೆ.
ವಿಶ್ವವಿದ್ಯಾನಿಲಯದಲ್ಲಿ ಕೋವಿಡ್ ತಪಾಸಣೆ ನಡೆಸುವ ಆನ್ವಿಕ ಜೀವಶಾಸ್ತ್ರ ಪ್ರಯೋಗಾಲಯದ ಪೆÇ್ರ. ರಾಜೇಂದ್ರ ಪಿಲಾಂಗಟ್ಟೆ ಅವರ ಮಾರ್ಗದರ್ಶನದಲ್ಲಿ ಅಶ್ವಥ್ ಅವರು ಸಂಶೋಧನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿವೇತನವು ಒಂದು ವರ್ಷ ಅವಧಿಯದ್ದಾಗಿದ್ದು, ಈ ಕಾಲಾವಧಿಯಲ್ಲಿ ಪಡ್ರ್ಯೂ ವಿಶ್ವವಿದ್ಯಾಲಯದ ಪೆÇ್ರ. ಡಗ್ಲಾಸ್ ಲಾಕಾಂಟ್ಜ್ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆ ಮುಂದುವರಿಯಲಿದೆ. ಕೆ.ಎಸ್ ಅಶ್ವತಿ ಅವರು ವಯನಾಡಿನ ಸುಲ್ತಾನ್ ಬತ್ತೇರಿ ನಿವಾಸಿಯಾಗಿದ್ದಾರೆ.
ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿಗೆ ಅಂತಾರಾಷ್ಟ್ರೀಯ ಫೆಲೋಶಿಪ್
0
ಫೆಬ್ರವರಿ 04, 2023
Tags





