HEALTH TIPS

ಹಿಂಡೆನ್‌ಬರ್ಗ್‌ ವರದಿ ಆಧಾರದ ಸುದ್ದಿಗಳಿಗೆ ತಡೆಯಾಜ್ಞೆ ಕೋರಿದ್ದ ಮನವಿ ತಿರಸ್ಕಾರ

 

            ನವದೆಹಲಿ: 'ಅದಾನಿ ಸಮೂಹ' ಕುರಿತು ಅಮೆರಿಕದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್‌ ರಿಸರ್ಚ್‌ ವರದಿಯನ್ನು ಆಧರಿಸಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

              ಹಿಂಡೆನ್‌ಬರ್ಗ್ ವರದಿಯ ಹಿಂದೆ ಪಿತೂರಿ ಇದೆ ಎಂದು ಆರೋಪಿಸಿರುವ ವಕೀಲ ಎಂಎಲ್ ಶರ್ಮಾ ಅವರು ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದರ ಜತೆಗೆ ಮಾಧ್ಯಮಗಳಿಗೆ ತಡೆಯಾಜ್ಞೆ ನೀಡಬೇಕೆಂಬ ವಿಷಯವನ್ನು ಅವರು ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್, ನ್ಯಾ. ಪಿ. ಎಸ್. ನರಸಿಂಹ ಮತ್ತು ಜೆ. ಬಿ. ಪರ್ದಿವಾಲಾ ಅವರ ಪೀಠದ ಮುಂದೆ ಪ್ರಸ್ತಾಪಿಸಿದರು.

                 'ನಾವು ಎಂದಿಗೂ ಮಾಧ್ಯಮಗಳಿಗೆ ಯಾವುದೇ ತಡೆಯಾಜ್ಞೆ ನೀಡುವುದಿಲ್ಲ. ಈ ವಿಷಯದಲ್ಲಿ ಶೀಘ್ರದಲ್ಲೇ ಆದೇಶ ಪ್ರಕಟಿಸುತ್ತೇವೆ' ಎಂದು ಪೀಠವು ತಿಳಿಸಿತು.     ಮಾಧ್ಯಮಗಳು ಸಂಚಲನ ಮೂಡಿಸುತ್ತಿವೆ ಎಂದು ಶರ್ಮಾ ಪುನರುಚ್ಚರಿಸುತ್ತಿದ್ದಂತೆ, 'ಸಮಂಜಸವಾದ ವಾದವನ್ನು ಮಾಡಿ' ಎಂದು ಪೀಠ ಎಚ್ಚರಿಸಿತು.

                 ಮಾಧ್ಯಮಗಳು ಸುದ್ದಿ ವರದಿಗಳನ್ನು ಪ್ರಕಟಿಸುವುದನ್ನು ಮುಂದುವರೆಸಿದರೆ, ಭಾರತೀಯ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಉಂಟಾಗುತ್ತದೆ. ಹೂಡಿಕೆದಾರರಲ್ಲಿ ಭಯ ಮೂಡುತ್ತದೆ ಎಂದು ಶರ್ಮಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

                ಹಿಂಡೆನ್‌ಬರ್ಗ್ ವರದಿಯನ್ನು ಪರಿಶೀಲಿಸಲು ರಚಿಸಲಾಗುವ ಸಮಿತಿಯಲ್ಲಿ ಸೇರಿಸಲು ಕೇಂದ್ರವು ಸೂಚಿಸಿದ ತಜ್ಞರ ಹೆಸರನ್ನು ಮುಚ್ಚಿದ ಲಕೋಟೆಯಲ್ಲಿ ನೀಡಿದರೆ ಅದನ್ನು ಸ್ವೀಕರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಫೆಬ್ರುವರಿ 17 ರಂದು ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries