HEALTH TIPS

ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಮಾರ್ಪಾಡು: ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕಿರುವ ಅಭ್ಯರ್ಥಿಗಳು

                    ವದೆಹಲಿ:ಸೇನೆಯು ತನ್ನ ಅಗ್ನಿವೀರ್ (Agniveer) ನೇಮಕಾತಿ ಪ್ರಕ್ರಿಯೆಯಲ್ಲಿ ಮಾರ್ಪಾಡು ಮಾಡಿದ್ದು, ಸೇನೆಗೆ ಸೇರ್ಪಡೆಯಾಗಲು ಬಯಸುವವರು ತಮ್ಮ ಹೆಸರು ನೋಂದಾಯಿಸಿಕೊಂಡಿರುವ ಕೇಂದ್ರಗಳಲ್ಲಿ ಮೊದಲು ಆನ್‌ಲೈನ್‌ನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕಾಗಿದೆ.

                 ಇದರ ನಂತರ ನೇಮಕಾತಿ ರ್ಯಾಲಿಗಳಲ್ಲಿ ದೈಹಿಕ ಅರ್ಹತಾ ಪರೀಕ್ಷೆ ನಡೆದ ನಂತರ, ಆಯ್ಕೆಗೂ ಮುನ್ನ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ ಎಂದು indianexpress.com ವರದಿ ಮಾಡಿದೆ.

                   ಈ ಕುರಿತು ಶುಕ್ರವಾರ ಜಾಹೀರಾತು ಬಿಡುಗಡೆ ಮಾಡಿರುವ ಸೇನೆಯು, ಸೇನೆಗೆ ಸೇರ್ಪಡೆಯಾಗಲು ಬಯಸುವ ಅಭ್ಯರ್ಥಿಗಳು ಹಾದು ಹೋಗಬೇಕಾದ ಮೂರು ಹಂತಗಳ ಕುರಿತು ವಿವರಿಸಿದೆ. ಇದಕ್ಕೂ ಮುನ್ನ ಇದ್ದ ಸೇನಾ ನೇಮಕಾತಿ ಪ್ರಕ್ರಿಯೆಯಲ್ಲಿ ಸೇನೆಗೆ ಸೇರ್ಪಡೆಯಾಗಲು ಬಯಸುವ ಅಭ್ಯರ್ಥಿಗಳು ಮೊದಲು ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ನಂತರ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಿತ್ತು‌ ಈ ಎರಡರಲ್ಲೂ ಉತ್ತೀರ್ಣರಾದವರು ಕೊನೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕಾಗಿತ್ತು.

                ಈವರೆಗೆ 19,000 ಅಗ್ನಿವೀರ್ ಯೋಧರು ಸೇನೆಗೆ ಸೇರ್ಪಡೆಯಾಗಿದ್ದು, ಮಾರ್ಚ್ ಮೊದಲ ವಾರದ ವೇಳೆಗೆ ಇನ್ನೂ 21,000 ಯೋಧರು ಸೇನೆಗೆ ಸೇರ್ಪಡೆಯಾಗಲಿದ್ದಾರೆ. 2023-24ನೇ ಸುತ್ತಿನಲ್ಲಿ ಸೇನೆಗೆ ಸೇರ್ಪಡೆಯಾಗಲು ಬಯಸುತ್ತಿರುವ 40,000 ಅಭ್ಯರ್ಥಿಗಳಿಗೆ ನೂತನ ನೇಮಕಾತಿ ನಿಯಮಗಳು ಅನ್ವಯಿಸಲಿವೆ.

             ಇದಕ್ಕೂ ಮುನ್ನ, ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳ ಸಂಖ್ಯೆ ಸಣ್ಣ ಪಟ್ಟಣಗಳಲ್ಲಿ ಸುಮಾರು 5,000 ಇದ್ದರೆ, ದೊಡ್ಡ ನಗರಗಳಲ್ಲಿ ಸುಮಾರು 1.5 ಲಕ್ಷದವರೆಗೆ ಇತ್ತು.

                   ಈ ಕುರಿತು The Indian Express ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿರುವ ಸೇನಾ ಅಧಿಕಾರಿಯೊಬ್ಬರು, ನೇಮಕಾತಿ ರ್ಯಾಲಿಗಳಲ್ಲಿ ಭಾಗವಹಿಸುವ ಸಾವಿರಾರು ಅಭ್ಯರ್ಥಿಗಳಿಗೆ ತಗುಲುವ ಭಾರಿ ಮೊತ್ತದ ಆಡಳಿತಾತ್ಮಕ ವೆಚ್ಚ ಹಾಗೂ ಸಾರಿಗೆ ವೆಚ್ಚವನ್ನು ಪರಿಗಣಿಸಿ, ನೇಮಕಾತಿ ಪ್ರಕ್ರಿಯೆಯಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

                    "ಈ ಹಿಂದಿನ ಪ್ರಕ್ರಿಯೆಯಲ್ಲಿ ದೊಡ್ಡ ಸಂಖ್ಯೆಯ ಅಭ್ಯರ್ಥಿಗಳನ್ನು ತಪಾಸಣೆಗೊಳಪಡಿಸಬೇಕಾಗಿತ್ತು. ಇದರಿಂದ ಆಡಳಿತಾತ್ಮಕ ಸಂಪನ್ಮೂಲಗಳ ಮೇಲೆ ಒತ್ತಡ ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ದೊಡ್ಡ ಸಂಖ್ಯೆಯ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಬೇಕಾಗಿತ್ತು ಮತ್ತು ಗಮನಾರ್ಹ ಪ್ರಮಾಣದ ವೈದ್ಯಕೀಯ ಸಿಬ್ಬಂದಿಯನ್ನು ಸೇನಾ ನೇಮಕಾತಿ ರ್ಯಾಲಿಗಳಿಗೆ ಮೀಸಲಿಡಬೇಕಿತ್ತು" ಎಂದು ಅವರು ಹೇಳಿದ್ದಾರೆ.

           ಹೊಸ ನೇಮಕಾತಿ ಪ್ರಕ್ರಿಯೆಯಿಂದ ರ್ಯಾಲಿ ಆಯೋಜನೆಗೆ ತಗುಲುತ್ತಿದ್ದ ವೆಚ್ಚದಲ್ಲಿ ಗಮನಾರ್ಹ ಪ್ರಮಾಣದ ಕಡಿತವಾಗಲಿದೆ ಮತ್ತು ಆಡಳಿತಾತ್ಮಕ ಹಾಗೂ ಸಾರಿಗೆ ಸೌಕರ್ಯದ ಮೇಲಿನ ಹೊರೆ ತಗ್ಗಲಿದೆ ಎಂದೂ ಅವರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries