HEALTH TIPS

ಸುಪ್ರೀಂಕೋರ್ಟ್‌ ಕಲಾಪದ ನೇರ ಪ್ರಸಾರದಲ್ಲಿ ಲಿಪ್ಯಂತರಕ್ಕೆ ಚಾಲನೆ

 

             ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ನಡೆಯುವ ಕಲಾಪಗಳನ್ನು ನೇರ ಪ್ರಸಾರದಲ್ಲಿ ಲಿಪ್ಯಂತರ ಮಾಡುವ ಕಾರ್ಯಕ್ಕೆ ಪ್ರಾಯೋಗಿಕವಾಗಿ ಮಂಗಳವಾರ ಚಾಲನೆ ನೀಡಲಾಯಿತು.

                     ಈ ಕಾರ್ಯಕ್ಕೆ ಕೃತಕ ಬುದ್ಧಿಮತ್ತೆ (ಎಐ) ಹಾಗೂ 'ನೈಸರ್ಗಿಕ ಭಾಷಾ ಸಂಸ್ಕರಣಾ ತಂತ್ರಜ್ಞಾನ' (ಎನ್‌ಎಲ್‌ಪಿಟಿ) ವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಸುಪ್ರೀಂಕೋರ್ಟ್‌ ಮೂಲಗಳು ಹೇಳಿವೆ.

                   ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಸಾಂವಿಧಾನಿಕ ಪೀಠವು ನಡೆಸಿದ ಪ್ರಕರಣವೊಂದರ ವಿಚಾರಣೆಯನ್ನು ಈ ತಂತ್ರಜ್ಞಾನಗಳನ್ನು ಬಳಸಿ, ಲಿಪ್ಯಂತರ ಮಾಡಲಾಯಿತು. ಲಿಪ್ಯಂತರ ಮಾಡಲಾದ ಮಾಹಿತಿಯನ್ನು ವಕೀಲರಿಗೆ ನೀಡಲಾಗುತ್ತದೆ. ಅವರು ಪರಿಶೀಲನೆ ನಡೆಸಿದ ಬಳಿಕ, ಅದನ್ನು ಸುಪ್ರೀಂಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

                 'ಒಂದು ಅಥವಾ ಎರಡು ದಿನಗಳ ಕಾಲ ಲಿಪ್ಯಂತರಿಸುವ ಕಾರ್ಯವನ್ನು ಪ್ರಾಯೋಗಿಕವಾಗಿ ಮಾಡಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಕಂಡುಬರುವ ನ್ಯೂನತೆಗಳನ್ನು ಸರಿಪಡಿಸಿದ ನಂತರ ನಿಯಮಿತವಾಗಿ ಈ ಕಾರ್ಯವನ್ನು ಮುಂದುವರಿಸಲಾಗುತ್ತದೆ' ಎಂದು ಮುಖ್ಯನ್ಯಾಯಮೂರ್ತಿ ಚಂದ್ರಚೂಡ್‌ ತಿಳಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries