HEALTH TIPS

ಉತ್ತರಪ್ರದೇಶ: ಕೋಲ್ಡ್‌ ಸ್ಟೋರೇಜ್‌ ಕುಸಿತ; 20 ಕ್ಕೂ ಅಧಿಕ ಕಾರ್ಮಿಕರು ಸಿಲುಕಿರುವ ಶಂಕೆ

     ಸಂಭಾಲ್: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಗುರುವಾರ ಕೋಲ್ಡ್ ಸ್ಟೋರೇಜ್ ಒಂದು ಕುಸಿದಿದ್ದು, 20ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಚಂದೌಸಿಯ ಮಾವಾಯಿ ಗ್ರಾಮದ ಕೋಲ್ಡ್ ಸ್ಟೋರೇಜ್‌ನಲ್ಲಿ ಈ ಘಟನೆ ನಡೆದಿದೆ.
     ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳೊಂದಿಗೆ ತಕ್ಷಣ ಸ್ಥಳಕ್ಕೆ ತಲುಪುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

     ಸ್ಥಳೀಯ ಜನರು ಈಗಾಗಲೇ ಘಟನಾಸ್ಥಳಕ್ಕೆ ತಲುಪಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಕಟ್ಟಡದ ಕುಸಿತದ ನಂತರ ಅಮೋನಿಯಾ ಅನಿಲ ಸೋರಿಕೆ ಕೂಡಾ ಆಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಒಳಗೆ ಬಂದು ಅನಿಲ ಸೋರಿಕೆಯನ್ನು ತಡೆಗಟ್ಟಿದ್ದಾರೆ.

    ಏಳರಿಂದ ಎಂಟು ಜೆಸಿಬಿ ಯಂತ್ರಗಳು ಅವಶೇಷಗಳನ್ನು ತೆರವುಗೊಳಿಸಲು ಮತ್ತು ಅದರ ಅಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸುವ ಕೆಲಸ ಮಾಡುತ್ತಿವೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries