HEALTH TIPS

ಕಯ್ಯಾರ ಅಧ್ಯಯನ ಭವನ ಶಿಲಾನ್ಯಾಸ 23 ರಂದು

                   ಬದಿಯಡ್ಕ: ಕರ್ನಾಟಕ ಗಡಿ ಅಭಿವೃದ್ದಿ ಪ್ರಾಧಿಕಾರ, ಕವಿತಾ ಕುಟೀರ ಪೆರಡಾಲ ಹಾಗೂ ನಾಡೋಜ ಕಿಞ್ಞಣ್ಣ್ಣ ರೈ ಸಾಂಸ್ಕøತಿಕ ಅ|ಧ್ಯಯನ ಭವನ ಕಟ್ಟಡ ನಿರ್ಮಾಣ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಾಡೋಜ ಕಿಞ್ಞಣ್ಣ ರೈ ಸಾಂಸ್ಕøತಿಕ ಕನ್ನಡ ಅಧ್ಯಯನ ಭವನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಮಾ.23 ರಂದು ಗುರುವಾರ ಬೆಳಿಗ್ಗೆ 11 ಕ್ಕೆ ಬದಿಯಡ್ಕ ಕಲ್ಲಕಳಿಯ ಬತ್ತೇರಿ ಪರಿಸರದಲ್ಲಿ ನಡೆಯಲಿದೆ.

     ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಸಂಸ್ಕøತಿ ಸಚಿವ ವಿ.ಸುನಿಲ್ ಕುಮಾರ್ ಶಿಲಾನ್ಯಾಸ ನೆರವೇರಿಸುವರು. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಗೌರವ ಉಪಸ್ಥಿತರಿರುವರು.

     ಬಳಿಕ ಬದಿಯಡ್ಕ ಗುರು ಸದನ ಸಭಾ ಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ |ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತಿ ಶ್ರೀಗಳು ಆಶೀರ್ವಚನ ನೀಡುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅ|ಧ್ಯಕ್ಷತೆ ವಹಿಸುವರು. ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ಉದ್ಘಾಟಿಸುವರು. ದಕ್ಷಿಣ ಕನ್ನಡ ಜಿಲ್ಲಾಧ|ಇಕಾರಿ ರವಿಕುಮಾರ್ ಎಂ.ಆರ್, ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ, ಉದ್ಯಮಿ ಸದಾಶಿವ ಶೆಟ್ಟಿ.ಕುಳೂರು ಕನ್ಯಾನ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅ||ಧ್ಯಕ್ಷ ಡಾ.ಎಂ.ಮೋಹನ ಆಳ್ವ ಗೌರವ ಉಪಸ್ಥಿತರಿರುವರು. ದಕ್ಷಿಣ ಕನ್ನಡ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಅಭಿಷೇಕ್ ವಿ, ಕನ್ನಡ ಸಂಸ್ಕøತಿ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಸಹಾಯಕ ನಿರ್ದೇಶಕ ರಾಜೇಶ್, ಕಾಸರಗೋಡು ಜಿ.ಪಂ. ಮಾಜಿ ಅಧ್ಯಕ್ಷ ಎ,ಜಿ.ಸಿ. ಬಶೀರ್, ಬದಿಯಡ್ಕ ಗ್ರಾ.ಪಂ.ಅಧ್ಯಕ್ಷೆ ಶಾಂತಾ ಬಾರಡ್ಕ ಅತಿಥಿಗಳಾಗಿ ಉಪಸ್ಥಿತರಿರುವರು. ಸಮಾರಂಭಕ್ಕೆ ಸಾಹಿತ್ಯ ಅಭಿಮಾನಿಗಳು ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಗಡಿಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ಕವಿತಾ ಕುಟೀರದ ಅಧ್ಯಕ್ಷ ದುರ್ಗಾಪ್ರಸಾದ್ ರೈ, ಕಾರ್ಯದರ್ಶಿ ಡಾ.ಪ್ರಸನ್ನ ರೈ ಕಲ್ಲಕಳಿಯ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries