ಮುಳ್ಳೇರಿಯ: ಅಡೂರಿನ ವಿದ್ಯಾಭಾರತಿ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಮಾರ್ಚ್ 3ರಂದು ಅಪರಾಹ್ನ 3ರಿಂದ ಅಡೂರಿನ ವಿದ್ಯಾಭಾರತಿ ವಿದ್ಯಾಲಯದಲ್ಲಿ ನಡೆಯಲಿದೆ. ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಅಡೂರು ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಸಭಾ ಕಾರ್ಯಕ್ರಮದ ಬಳಿಕ ಶಾಲೆಯ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ವಾರ್ಷಿಕೋತ್ಸವದ ಅಂಗವಾಗಿ ಶಾಲೆಯಲ್ಲಿ ಮಕ್ಕಳಿಗಾಗಿ ಛದ್ಮವೇಷ ಸ್ಪರ್ಧೆ, ಕೈಬರಹ ಸ್ಪರ್ಧೆ, ಚಿತ್ರ ರಚನಾ ಸ್ಪರ್ಧೆ, ಬೆಂಕಿ ಇಲ್ಲದೆ ವಿವಿಧ ಖಾದ್ಯಗಳನ್ನು ತಯಾರಿಸುವ ಸ್ಪರ್ಧೆ ಮೊದಲಾದ ಸ್ಪರ್ಧೆಗಳು ನಡೆದುವು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಆಡಳಿತ ಸಮಿತಿ ಸದಸ್ಯರು ಹಾಗೂ ಮಕ್ಕಳ ಪೆÇೀಷಕರು ಭಾಗವಹಿಸಿದ್ದರು.
ಅಡೂರು ವಿದ್ಯಾಭಾರತಿ ವಾರ್ಷಿಕೋತ್ಸವ ಮಾ.3ಕ್ಕೆ
0
ಮಾರ್ಚ್ 01, 2023




.jpg)
