HEALTH TIPS

ಎಚ್‌ಎಎಲ್‌ ನಿರ್ಮಿತ 70 ತರಬೇತಿ ವಿಮಾನ ಖರೀದಿಗೆ ಅನುಮೋದನೆ

              ನವದೆಹಲಿ: ವಾಯುಪಡೆಗಾಗಿ ಎಚ್‌ಎಎಲ್‌ ನಿರ್ಮಿತ 70 ತರಬೇತಿ ವಿಮಾನಗಳನ್ನು (ಎಚ್‌ಟಿಟಿ-40) ₹6,828 ಕೋಟಿ ವೆಚ್ಚದಲ್ಲಿ ಖರೀದಿಸಲು ಪ್ರಧಾನಿ ನರೇಂಧ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿಯು (ಸಿಸಿಎಸ್‌) ಬುಧವಾರ ಅನುಮೋದನೆ ನೀಡಿದೆ.

           ಈ ಕುರಿತು ಟ್ವೀಟ್‌ ಮಾಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು, 'ಈ ವಿಮಾನಗಳನ್ನು ಮುಂದಿನ ಆರು ವರ್ಷಗಳ ಅವಧಿಯಲ್ಲಿ ಪೂರೈಕೆ ಮಾಡಲಾಗುತ್ತದೆ' ಎಂದು ತಿಳಿಸಿದ್ದಾರೆ.

                  'ದೇಶದ ರಕ್ಷಣಾ ಕ್ಷೇತ್ರವನ್ನು ಸ್ವಾವಲಂಬಿಯನ್ನಾಗಿಸುವ ಹಾಗೂ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಈ ನಿರ್ಧಾರ ಮಹತ್ವದ ಹೆಜ್ಜೆಯಾಗಿದೆ. ದೇಶದಲ್ಲಿರುವ ನೂರಾರು ಸಣ್ಣ, ಮಧ್ಯಮ ಉದ್ದಿಮೆಗಳಿಗೆ ವಿಪುಲ ಅವಕಾಶಗಳು ತೆರೆದುಕೊಳ್ಳಲಿವೆ' ಎಂದೂ ಹೇಳಿದ್ದಾರೆ.

              'ಹಿಂದೂಸ್ತಾನ್ ಏರೋನಾಟಿಕ್ಸ್‌ ಲಿಮಿಟೆಡ್ (ಎಚ್‌ಎಎಲ್) ನಿರ್ಮಿಸುವ ಈ ವಿಮಾನಗಳು ಕಡಿಮೆ ವೇಗದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿವೆ. ಹೀಗಾಗಿ, ಇವುಗಳನ್ನು ಬಳಸಿ ಪರಿಣಾಮಕಾರಿ ತರಬೇತಿ ನೀಡಲು ಸಾಧ್ಯ' ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries