HEALTH TIPS

ನಾಗಾಲ್ಯಾಂಡ್‌ನಲ್ಲಿ ನೇಫಿಯು ರಿಯೊ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

 

           ಕೊಹಿಮಾ: ಗಡಿ ರಾಜ್ಯ ನಾಗಾಲ್ಯಾಂಡ್‌ನಲ್ಲಿ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ (ಎನ್‌ಡಿಪಿಪಿ) ನೇಫಿಯು ರಿಯೊ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

                ರಾಜ್ಯಪಾಲ ಲಾ. ಗಣೇಶನ್‌ ಅವರು ನೇಫಿಯು ರಿಯೊ ಅವರಿಗೆ ಪ್ರಮಾಣವಚನ ಬೋಧಿಸಿದರು.

ಇವರ ಜೊತೆಗೆ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರ ಪೈಕಿ ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಮಾಣವಚನ ಸ್ವೀಕರಿಸಿದರು.

           ಈ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭಾಗವಹಿಸಿದ್ದರು.

            ನಾಗಾಲ್ಯಾಂಡ್ ಚುನಾವಣೆಯಲ್ಲಿ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟ 60 ಸದಸ್ಯ ಬಲದ ವಿಧಾನಸಭೆಯಲ್ಲಿ 37 ಸ್ಥಾನಗಳನ್ನು ಗೆದ್ದುಕೊಂಡಿತ್ತು. ರಾಜ್ಯದ ಎಲ್ಲಾ ಇತರ ಪಕ್ಷಗಳು ರಿಯೊ ನೇತೃತ್ವದ ಮೈತ್ರಿಕೂಟಕ್ಕೆ ತಮ್ಮ ಬೆಂಬಲ ಸೂಚಿಸಿವೆ.

               ಎನ್‌ಡಿಪಿಪಿ 25, ಬಿಜೆಪಿ 12, ಎನ್‌ಪಿಎಫ್‌ 5, ಎನ್‌ಸಿಪಿ 7, ಲೋಕ ಜನಶಕ್ತಿ ಪಕ್ಷ (ರಾಮ್‌ ವಿಲಾಸ್) 2, ಕೇಂದ್ರ ಸಚಿವ ರಾಮದಾಸ್ ಆಠವಳೆ ನೇತೃತ್ವದ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ (ಆರ್‌ಪಿ) 2 ಹಾಗೂ ಪಕ್ಷೇತರರು 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries