ಕಾಸರಗೋಡು: ಕೆಎಸ್‍ಟಿಎ ಸಂಘಟನೆಯನ್ನು ಕಾಸರಗೋಡು ಜಿಲ್ಲೆಯಲ್ಲಿ ಸುದೀರ್ಘ ಕಾಲದಿಂದ ಮುನ್ನಡೆಸಿಕೊಂಡು ಬಂದಿರುವ ಸಂಘಟನೆಯ ಪದಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ ಕಾಸರಗೋಡಿನಲ್ಲಿ ಜರುಗಿತು.
ಪ್ರಗತಿಪರ ಚಳವಳಿಯ ಮುಂಚೂಣಿ ನಾಯಕ ಎಂ.ವಿ.ಬಾಲಕೃಷ್ಣನ್ ಸಮಾರಂಭ ಉದ್ಘಾಟಿಸಿದರು. ಜಿಲ್ಲ ಸಮಿತಿ ಅಧ್ಯಕ್ಷ ಯು. ಶ್ಯಾಮ್ ಭಟ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಉಪಾಧ್ಯಕ್ಷೆ ಎ.ಕೆ. ಬಿನಾ, ರಾಜ್ಯ ಕಾರ್ಯದರ್ಶಿ ಕೆ.ರಾಘವನ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಪಿ. ದಿಲೀಪಕುಮಾರ್, ಆರ್. ಬಿನು, ರಾಜ್ಯ ಸಮಿತಿ ಸದಸ್ಯರಾದ ಕೆ.ಹರಿದಾಸ್, ಎನ್.ಕೆ.ಲಸಿತಾ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ಸಿ.ಎಂ. ಜಿಲ್ಲಾಧ್ಯಕ್ಷರಾಗಿದ್ದ ಮೀನಾಕುಮಾರಿ, ಎ.ಆರ್. ವಿಜಯಕುಮಾರ್, ಜಿಲ್ಲಾ ಉಪಾಧ್ಯಕ್ಷ ಪಿ.ರವೀಂದ್ರನ್, ಜಿಲ್ಲಾ ಜತೆ ಕಾರ್ಯದರ್ಶಿ ಕೆ. ಶೋಭಾ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಕೆ.ವಿ.ದಾಮೋದರನ್, ಜಿಲ್ಲಾ ಸಮಿತಿ ಸದಸ್ಯರಾದ ಪಿ.ವಿ. ಶಶಿ, ಕೆ. ವತ್ಸಲಾ ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯದರ್ಶಿ ಟಿ.ಪ್ರಕಾಶ್ ಸ್ವಾಗತಿಸಿದರು. ಕೋಶಾಧಿಕಾರಿ ಎಂ.ಇ.ಚಂದ್ರಾಂಗದನ್ ವಂದಿಸಿದರು.
ಕೆಎಸ್‍ಟಿಎ ವತಿಯಿಂದ ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ
0
ಮಾರ್ಚ್ 14, 2023
Tags





