ತಿರುವನಂತಪುರಂ: ಶುಕ್ರವಾರದವರೆಗೆ (ಮಾರ್ಚ್ 31) ರಾಜ್ಯದ ವಿವಿಧ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡುಗು ಸಿಡಿಲು ಅಪಾಯಕಾರಿಯಾದ್ದರಿಂದ, ಸಿಡಿಲಿನ ಲಕ್ಷಣಗಳು ಕಂಡುಬಂದರೆ ತೆರೆದ ಪ್ರದೇಶಗಳಲ್ಲಿ ನಿಲ್ಲುವುದನ್ನು ತಪ್ಪಿಸಬೇಕು. ಗೃಹೋಪಯೋಗಿ ಉಪಕರಣಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಮತ್ತು ವಿದ್ಯುತ್ ಉಪಕರಣಗಳಿಗೆ ಹತ್ತಿರ ನಿಂತಿರಬಾರದು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಎಚ್ಚರಿಕೆಯಲ್ಲಿ ತಿಳಿಸಲಾಗಿದೆ.
ಶುಕ್ರವಾರದವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ; ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ
0
ಮಾರ್ಚ್ 28, 2023


