HEALTH TIPS

ಉಪ್ಪಳ ಶ್ರೀರಾಮಕೃಷ್ಣ ವಿದ್ಯಾಲಯದ ನೂತನ ಕಟ್ಟಡ ಉದ್ಘಾಟನೆ





                ಉಪ್ಪಳ :ಜಿಲ್ಲಾ ಬಂಟರ ಸಂಘದ ಆಶ್ರಯದಲ್ಲಿ ಉಪ್ಪಳದಲ್ಲಿ ನಡೆಸಲಾಗುತ್ತಿರುವ ಶ್ರೀ ರಾಮಕೃಷ್ಣ ವಿದ್ಯಾಲಯಕ್ಕಾಗಿ ಹೊಸತಾಗಿ ನಿರ್ಮಿಸಲಾದ ನೋರ್ತ್ ಬ್ಲೋಕ್ ಕಟ್ಟಡದ ಉದ್ಘಾಟನೆಯನ್ನು  ಉದ್ಯಮಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ನಡೆಸಿಕೊಟ್ಟರು.  ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ವಕೀಲ ಸುಬ್ಬಯ ರೈ ಅಧ್ಯಕ್ಷತೆ ವಹಿಸಿದರು.   
         ಉದ್ಯಮಿ ಕೆ.ಕೆ.ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ, ಮಂಜೇಶ್ವರ ಬಂಟರ ಸಂಘದ ಅಧ್ಯಕ್ಷ ದಾಸಣ್ಣ ಆಳ್ವ ಕುಳೂರು ಬೀಡು, ಕುಂಬಳೆ ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಳಮಲೆ, ಕಾಸರಗೋಡು ವಲಯ ಬಂಟರ ಸಂಘದ ಅಧ್ಯಕ್ಷ ಸುಬ್ಬಣ್ಣಶೆಟ್ಟಿ ಕುಚ್ಚಿಕ್ಕಾಡು ಉಪಸ್ಥಿತರಿದ್ದರು.
             ಶಾಲಾ ಸಂಚಾಲಕ ಕೋಡಿಬೈಲು ನಾರಾಯಣ ಹೆಗ್ಡೆ ಶ್ರೀರಾಮಕೃಷ್ಣ ವಿದ್ದಾಲಯವು ಬೆಳೆದು ಬಂದ ರೀತಿಯ ಕುರಿತು ವಿವರಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಶ್ರಿತ ಶೆಟ್ಟಿ ಪ್ರಾರ್ಥನೆ ಹಾಡಿದರು.ಜಿಲ್ಲಾ ಬಂಟರ ಸಂಘದ ಕಾರ್ಯದರ್ಶಿ ಮೋಹನ್ ರೈ ಸ್ವಾಗತಿಸಿದರು. ಅರವಿಂದಾಕ್ಷ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಪ್ರಾಂಶಪಾಲೆ ಶುಭಲತಾ ಭಂಡಾರಿ ವಂದಿಸಿದರು. ಶಾಲಾ ಮಕ್ಕಳ ಸ್ವಾಗತ ನೃತ್ಯ, ಬಳಿಕ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಮಕ್ಕಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ಜರಗಿತು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries