ಕಾಸರಗೋಡು: ಜಿಲ್ಲೆಯ ಬಡ್ಸ್ ಶಾಲೆಗಳನ್ನು ಕೇಂದ್ರವಾಗಿಟ್ಟುಕೊಂಡು ಉದ್ಯೋಗ ಕೌಶಲ್ಯ ತರಬೇತಿ ಕೇಂದ್ರಗಳನ್ನು ಆರಂಭಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಚೇಂಬರ್‍ನಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.
ಜಿಲ್ಲಾ ಕೌಶಲ್ಯ ಸಮಿತಿಯ ಸಹಯೋಗದಲ್ಲಿ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಉದ್ಯೋಗ ಮೇಳ ಹಾಗೂ ಎಲ್ಲಾ ರೀತಿಯ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಸಭೆಯಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಜಿಲ್ಲಾ ಕೌಶಲ್ಯಾಭಿವೃದ್ಧಿ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಆರ್ಥಿಕ ಸಾಕ್ಷರತೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಒಂದು ಲಕ್ಷ ಜನರಿಗೆ ತರಗತಿ ನೀಡಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು. ಜಿಲ್ಲಾ ಉಪ ಯೋಜನಾಧಿಕಾರಿ ನೆನೋಜ್ ಮೇಪಾಡಿಯಾತ್ ಮತ್ತು ರಾಜ್ಯ ಕೌಶಲ್ಯಾಭಿವೃದ್ಧಿ ಮಿಷನ್ ಜಿಲ್ಲಾ ಕೌಶಲ್ಯ ಸಂಯೋಜಕ ಎಂ.ಜಿ.ನಿತಿನ್ ಈ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎನ್.ವಿ.ಬಿಮಲ್, ಪಂಚಾಯಿತಿ ಉಪ ನಿರ್ದೇಶಕ ಜೇಸನ್ ಮ್ಯಾಥ್ಯೂ,ಕಾಸರಗೋಡು ಸರ್ಕಾರಿ ಕಾಲೇಜು ಪ್ರಾಂಶುಪಾಲ ಎ.ಎಲ್.ಅನಂತಪದ್ಮನಾಭ, ಎಲ್.ಬಿ.ಎಸ್ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಟಿ.ಮುಹಮ್ಮದ್ ಶುಕೂರ್, ಜಿಲ್ಲ ಉದ್ಯೋಗ ಅಧಿಕಾರಿ ಪವಿತ್ರನ್, ಜಿಲ್ಲಾ ಕಾರ್ಮಿಕ ಅಧಿಕಾರಿ ಎ.ಕೆ.ಜಯಶ್ರೀ, ವೆಲ್ಲಿಕೋತ್ ಸಂಸ್ಥೆಯ ಆರ್.ಸಿ.ಸಿಟಿ ಮ್ಯಾನೇಜರ್ ಗೋವಿಂದ್, ಅರ್ಥಶಾಸ್ತ್ರ ಮತ್ತು ಸಾಂಖ್ಯಿಕ ಇಲಾಖೆ ಉಪನಿರ್ದೇಶಕ ಅಭಿನೇಶ್ ಎಸ್.ಎಸ್, ಕೇರಳ ಸಣ್ಣ ಉದ್ಯಮ ಸಂಘದ ಜಿಲ್ಲಾಧ್ಯಕ್ಷ ರಾಜಾರಾಮ ಎಸ್. ಪೆರ್ಲ, ಮಹಾತ್ಮ ರಾಷ್ಟ್ರೀಯ ಫೆಲೋಶಿಪ್ ಪುರಸ್ಕøತ ಪಿ.ಸಿ.ಅಬ್ದುಲ್ ಸಮದ್, ಡೇರಿ ಇಲಾಖೆ ಉಪನಿರ್ದೇಶಕ ಮಹೇಶ್ ನಾರಾಯಣನ್, ಸಹಾಯಕ ಗಿರಿಜನ ಅಭಿವೃದ್ಧಿ ಅಧಿಕಾರಿ ಕೆ.ವಿ.ರಾಘವನ್, ಜಿಲ್ಲಾ ಕೈಗಾರಿಕಾ ಕೇಂದ್ರದ ವ್ಯವಸ್ಥಾಪಕಿ ಕೆ.ರೇಖಾ ಉಪಸ್ಥಿತರಿದ್ದರು.




