HEALTH TIPS

ವಿಶ್ವಸಂಸ್ಥೆಯಲ್ಲೂ 'ಕಾಂತಾರ' ಹವಾ; ಭಾರತದ ಪ್ರತಿನಿಧಿಯಾಗಿ ಕನ್ನಡದಲ್ಲೇ ಮಾತನಾಡಿದ ರಿಷಬ್​ ಶೆಟ್ಟಿ

    ಬೆಂಗಳೂರು: ಜಗತ್ತಿನಾದ್ಯಂತ ಸದ್ದು ಮಾಡಿದ್ದ ಕನ್ನಡದ ಸಿನಿಮಾ ಕಾಂತಾರ ಇದೀಗ ವಿಶ್ವಸಂಸ್ಥೆಯಲ್ಲೂ ತನ್ನ ಹವಾ ತೋರಿದ್ದು, ಅಲ್ಲಿ ವಿಶೇಷ ಪ್ರದರ್ಶನವನ್ನೂ ಕಂಡಿದೆ. ಅದರಲ್ಲೂ ಈ ಸಿನಿಮಾ ನಿರ್ದೇಶಕ-ನಟ ರಿಷಬ್ ಶೆಟ್ಟಿ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ಯುನೈಟೆಡ್ ನೇಷನ್ಸ್ ಹ್ಯೂಮನ್ ರೈಟ್ಸ್​ ಕೌನ್ಸಿಲ್​(ಯುಎನ್​ಎಚ್​ಆರ್​​ಸಿ)ನಲ್ಲಿ ಕನ್ನಡದಲ್ಲೇ ಮಾತನಾಡಿದ್ದು ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.
    ಭಾರತದ ಇಕೋ ಫಾನ್​ ಪ್ರತಿನಿಧಿಯಾಗಿ ಯುಎನ್​ಎಚ್​​ಆರ್​​​ಸಿಯಲ್ಲಿ ಮೌಖಿಕ ಹೇಳಿಕೆಯನ್ನು ಸಲ್ಲಿಸಲು ಹೆಮ್ಮೆ ಪಡುತ್ತೇನೆ. ಅರಣ್ಯವಾಸಿಗಳ ಸಾಂಸ್ಕೃತಿಕ ಹಕ್ಕುಗಳನ್ನು ಉತ್ತೇಜಿಸುವಲ್ಲಿ ಮತ್ತು ಕಾಂತಾರದಲ್ಲಿ ಅರಣ್ಯಗಳ ಸಂರಕ್ಷಣೆಯ ಮಹತ್ವವನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅರ್ಥೈಸಲಾಗಿದೆ ಎಂದು ಅವರು ಹೇಳಿದ್ದಾರೆ.
    ಪರಿಸರದ ಮಹತ್ವ, ಅದರೊಂದಿಗೆ ಜನರ ನಂಟು, ನಂಬಿಕೆ, ಆಚರಣೆಗಳನ್ನು ಕಾಂತಾರದಲ್ಲಿ ಹೇಗೆ ತೋರಿಸಲಾಗಿದೆ ಎಂಬ ಕುರಿತು ಸಿನಿಮಾ ಪ್ರದರ್ಶಿಸುವ ಮೂಲಕ ಅನಾವರಣಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೆಮ್ಮೆಯ ಕನ್ನಡಿಗನೊಬ್ಬ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿ, ಕನ್ನಡದಲ್ಲಿ ಮಾತನಾಡಿದ್ದು ನಿಜಕ್ಕೂ ಅದ್ಭುತ. ಅಭಿನಂದನೆಗಳು, ನಿಮ್ಮ ಕನ್ನಡಪ್ರೇಮಕ್ಕೆ ನನ್ನ ಹೃದಯಾಂತರಾಳದಿಂದ ಗೌರವವನ್ನು ಅರ್ಪಿಸುತ್ತೇನೆ ಎಂಬುದಾಗಿ ಕರ್ನಾಟಕದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ರಿಷಬ್​ ಶೆಟ್ಟಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries