ಕಾಸರಗೋಡು: ಕರ್ನಾಟಕ ಜಾನಪದ ಪರಿಷತ್ತು ಹಾಗು ಕನ್ನಡ ಸಂಸ್ಕøತಿ ಇಲಾಖೆ, ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ ಬೆಂಗಳೂರಿನ ರಾಮನಗರದ ಜಾನಪದ ಲೋಕದಲ್ಲಿ ಜರಗಿದ ಬುಡಕಟ್ಟು ಜಾನಪದ ಲೋಕೋತ್ಸವದಲ್ಲಿ ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ನಿರ್ದೇಶಕÀ ಕೆ.ವಿ.ರಮೇಶ್ ಅವರಿಗೆ ಜಾನಪದ ಲೋಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ನಿರ್ವಹಿಸಿದರು. ಪ್ರೊ.ಹಿ.ಚಿ.ಬೋರಲಿಂಗಯ್ಯ, ಪ್ರೊ.ಹಿ.ಶಿ.ರಾಮಚಂದ್ರೇ ಗೌಡ, ಹಿರಿಯ ನ್ಯಾಯವಾದಿ ಉದಯ ಹೊಳ್ಳ ಮುಂತಾದವರು ಉಪಸ್ಥಿತರಿದ್ದರು.
ಕೆ.ವಿ.ರಮೇಶ್ ಗೆ ಜಾನಪದ ಲೋಕ ಪ್ರಶಸ್ತಿ ಪ್ರದಾನ
0
ಮಾರ್ಚ್ 08, 2023


