HEALTH TIPS

ದೌರ್ಜನ್ಯಕ್ಕೊಳಗಾಗುವ ಮಹಿಳೆ, ಮಕ್ಕಳ ಪುನರ್ವಸತಿ- 'ಸಖಿ ಒನ್ ಸ್ಟಾಪ್'ಕೇಂದ್ರದ ಉದ್ಘಾಟನೆ



             ಕಾಸರಗೋಡು: ದೌರ್ಜನ್ಯಕ್ಕೊಳಗಾಗುವ ಮಹಿಳೆಯರು ಮತ್ತು ಮಕ್ಕಳಿಗಿರುವ ಆಶ್ರಯ ಒದಗಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಾಸರಗೋಡು ಅಣಂಗೂರಿನಲ್ಲಿ ಆರಂಭಿಸಲಾದ  'ಸಖಿ ಒನ್ ಸ್ಟಾಪ್'ಕೇಂದ್ರದ ಉದ್ಘಾಟನೆಯನ್ನು ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ವೀಣಾ ಜಾರ್ಜ್ ಆನ್‍ಲೈನ್ ಮೂಲಕ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು,  ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವುದರ ಜತೆಗೆ ದೌರ್ಜನ್ಯದ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ.  ಸಖಿ ಒನ್ ಸ್ಟಾಪ್ ಸೆಂಟರ್, ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಬೆಂಬಲ ಮತ್ತು ಕಾಳಜಿಯನ್ನು ಒದಗಿಸುವ ಒಂದು-ನಿಲುಗಡೆಯ ತಾಣವಾಗಿದೆ. ಆಶ್ರಯವಾಗಿದೆ. ರಾಜ್ಯದ 14 ಜಿಲ್ಲೆಗಳಲ್ಲಿ ಸಖಿ ಒನ್ ಸ್ಟಾಪ್ ಕೇಂದ್ರಕ್ಕೆ ಸ್ವಂತ ಕಟ್ಟಡ ನಿರ್ಮಿಸುವ ಗುರಿ ಹೊಂದಲಾಗಿದ್ದು, ಇದಕ್ಕೆ ಅಗತ್ಯವಾದ ಕ್ರಮಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.
             ಅಣಂಗೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಉದ್ಘಾಟನಾ ಫಲಕವನ್ನು ಅನಾವರಣಗೊಳಿಸಿದರು. ವಿಡಿಯೋ ಕಾನ್ಫರೆನ್ಸ್ ಕೊಠಡಿಯನ್ನು ಜಿಲ್ಲಾ ನಿರ್ಮಿತಿ ಕೇಂದ್ರದ ಜನರಲ್ ಮಾನೇಜರ್, ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್, ವಿಶೇಷಾಧಿಕಾರಿ, ಇ.ಪಿ.ರಾಜಮೋಹನ್, ಉದ್ಘಾಟಿಸಿದರು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಮುಖ್ಯ ಅತಿಥಿಯಾಗಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಜಿ.ಪ್ರಿಯಾಂಕಾ ಆನ್ ಲೈನ್‍ಮೂಲಕ ಪಾಲ್ಗೊಂಡಿದ್ದರು.  ಜಿಲ್ಲಾ ವಾರ್ತಾ ಅಧಿಕಾರಿ ಎಂ.ಮಧುಸೂದನನ್, ಜಿಲ್ಲಾ ಪರಿಶಿಷ್ಟ ಪಂಗಡ ಅಭಿವೃದ್ಧಿ ಅಧಿಕಾರಿ ಎಂ.ಮಲ್ಲಿಕಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶೈನಿ ಐಸಾಕ್, ಜಿಲ್ಲಾ ಐಸಿಡಿಎಸ್ ಕಾರ್ಯಕ್ರಮಾಧಿಕಾರಿ ಸಿ.ಸುಧಾ, ರಾಜ್ಯ ನಿರ್ಭಯ ಕೋಶದ ಕಾರ್ಯಕ್ರಮಾಧಿಕಾರಿ ಎಂ.ಪ್ರಭಾ, ಕೌನ್ಸಿಲರ್ ಸಮೀರಾ ಅಬ್ದುಲ್ ರಜಾಕ್ ಉಪಸ್ಥಿತರಿದ್ದರು.  ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿ.ಎಸ್.ಶಿಮ್ನಾ ಸ್ವಾಗತಿಸಿ, ಮಹಿಳಾ ರಕ್ಷಣಾಧಿಕಾರಿ ಪಿ.ಜ್ಯೋತಿ ವಂದಿಸಿದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries