ಬದಿಯಡ್ಕ:ಭಕ್ತಾದಿಗಳು ಎಲ್ಲಾ ರೀತಿಯಿಂದಲೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸುವುದರಿಂದ ಆ ಊರಿನಲ್ಲಿ ಧಾರ್ಮಿಕ ಚಟುವಟಿಕೆಗಳು ನಿರಂತರ ನಡೆಯಲು ಸಾಧ್ಯ ಎಂದು ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಸಭೆಯಲ್ಲಿ ಉದ್ಯಮಿ, ಧಾರ್ಮಿಕ ಮುಂದಾಳು ಬಿ ವಸಂತ ಪೈ ಬದಿಯಡ್ಕ ಅಭಿಪ್ರಾಯಪಟ್ಟರು.
ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿ ಕ್ಷೇತ್ರದ ಕುರಿತು ವಿವರಣೆಯನ್ನು ನೀಡಿದರು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೃಷ್ಣಮೂರ್ತಿ ಪುದುಕೋಳಿ, ಕಾರ್ಯಾಧ್ಯಕ್ಷ ರಾಮ ಕಾರ್ಮಾರ್, ಸೇವಾ ಸಮಿತಿ ಅಧ್ಯಕ್ಷ ಶ್ರೀಕೃಷ್ಣ ಭಟ್ ಪುದುಕೋಳಿ, ಆಡಳಿತ ಮೊಕ್ತೇಸರ ನರಸಿಂಹ ಭಟ್ ಕಾರ್ಮಾರು, ಯುವಕ ವೃಂದದ ಅಧ್ಯಕ್ಷ ನಾರಾಯಣ ಉಳ್ಳೋಡಿ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕುಂಜ ಪ್ರಾಸ್ತಾವಿಕ ಮಾತುಗಳನ್ನಾಡಿ ಮುಂದಿನ ಕಾರ್ಯಗಳ ಬಗ್ಗೆ ಸಭೆಗೆ ವಿವರಣೆ ನೀಡಿದರು. ಸುಂದರ ಶೆಟ್ಟಿ ಕೊಲ್ಲಂಗಾನ ಸ್ವಾಗತಿಸಿ ಶ್ಯಾಮ್ ಪ್ರಸಾದ್ ಮಾನ್ಯ ವಂದಿಸಿದರು.
ಕಾರ್ಮಾರು ಕ್ಷೇತ್ರ ಜೀರ್ಣೋದ್ಧಾರ ಸಮಿತಿ ಸಭೆ
0
ಮಾರ್ಚ್ 30, 2023


