HEALTH TIPS

H3N2: ಜಾರ್ಖಂಡ್‌ನಲ್ಲಿ ಎರಡು ಪ್ರಕರಣ ಪತ್ತೆ

 

              ನವದೆಹಲಿ: ಜಾರ್ಖಂಡ್‌ನಲ್ಲಿ ಇದೇ ಮೊದಲ ಬಾರಿಗೆ ಎಚ್‌3ಎನ್2 ವೈರಸ್ ಸೋಂಕಿನ ಎರಡು ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

                     ಶೀತ ಮತ್ತು ಜ್ವರದ ಲಕ್ಷಣ ಹೊಂದಿರುವ 68 ವರ್ಷದ ವೃದ್ಧೆಯಲ್ಲಿ ಶನಿವಾರ ಎಚ್‌3ಎನ್2 ಇನ್‌ಫ್ಲುಯೆಂಜಾ ವೈರಸ್ ದೃಢಪಟ್ಟಿದೆ.

ಅವರನ್ನು ಗುರುವಾರ ಟಾಟಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

       ಸೋಂಕು ತಗುಲಿದ ರೋಗಿಯನ್ನು ಪ್ರತ್ಯೇಕ ವಾಸದಲ್ಲಿರಿಸಿ ನಿಗಾ ವಹಿಸಲಾಗುತ್ತಿದೆ ಎಂದು ಪೂರ್ವ ಸಿಂಗ್‌ಭೂಮ್ ಜಿಲ್ಲೆಯ ಸಿವಿಲ್ ಸರ್ಜನ್ ಡಾ. ಜುಝಾರ್ ಮಾಂಝಿ ತಿಳಿಸಿದ್ದಾರೆ.

                       ರಾಂಚಿಯ ರಾಣಿ ಆಸ್ಪತ್ರೆಯಲ್ಲಿ ನಾಲ್ಕು ವರ್ಷದ ಮಗುವಿಗೆ ಎಚ್‌3ಎನ್2 ವೈರಸ್ ದೃಢಪಟ್ಟಿದೆ. ನ್ಯುಮೋನಿಯಾ ಲಕ್ಷಣದೊಂದಿಗೆ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಡಾ. ರಾಜೇಶ್ ಸಿಂಗ್ ತಿಳಿಸಿದ್ದಾರೆ.

                                   ಕೋವಿಡ್ ಸೋಂಕು ಪ್ರಕರಣ ಹೆಚ್ಚಳ...
                   ಜಾರ್ಖಂಡ್‌ನಲ್ಲಿ ಕೋವಿಡ್ ಸೋಂಕು ಪ್ರಕರಣದಲ್ಲೂ ಹೆಚ್ಚಳ ಕಂಡುಬಂದಿದೆ. ಶನಿವಾರದಂದು ಹೊಸದಾಗಿ ಐದು ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries