HEALTH TIPS

ಏ.13ಕ್ಕೆ 71 ಸಾವಿರ ನೇಮಕಾತಿ ಪತ್ರ ವಿತರಿಸಲಿರುವ ಮೋದಿ

 

                  ನವದೆಹಲಿ (PTI): ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 13ರಂದು ಸುಮಾರು 71,000 ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದು ಬಳಿಕ ವಿಡಿಯೊ ಸಂವಾದದ ಮೂಲಕ ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

                   ಈ ಕಾರ್ಯಕ್ರಮವು ರೋಜ್‌ಗಾರ್ ಮೇಳದ ಭಾಗವಾಗಿದ್ದು, ಇದರ ಅಡಿಯಲ್ಲಿ 10 ಲಕ್ಷ ಜನರಿಗೆ ಉದ್ಯೋಗ ನೀಡುವ ನಿರೀಕ್ಷೆಯಿದೆ.

                   ರೋಜ್ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಸುವತ್ತ ಕಾರ್ಯ‍ಪ್ರವೃತ್ತವಾಗಿದೆ. ಯುವಜನರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಅವರ ಭಾಗವಹಿಸುವಿಕೆಗೆ ಅವಕಾಶಗಳನ್ನು ಒದಗಿಸುತ್ತದೆ ಎಂದು ಹೇಳಲಾಗಿದೆ.

              ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ವಿವಿಧ ಸಚಿವಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರೈಲು ವ್ಯವಸ್ಥಾಪಕರು, ಸ್ಟೇಷನ್ ಮಾಸ್ಟರ್, ಹಿರಿಯ ವಾಣಿಜ್ಯ-ಕಮ್-ಟಿಕೆಟ್ ಕ್ಲರ್ಕ್, ಇನ್‌ಸ್ಪೆಕ್ಟರ್‌, ಸಬ್ ಇನ್‌ಸ್ಪೆಕ್ಟರ್, ಕಾನ್‌ಸ್ಟೆಬಲ್, ಸ್ಟೆನೋಗ್ರಾಫರ್, ಜೂನಿಯರ್ ಅಕೌಂಟೆಂಟ್, ಪೋಸ್ಟಲ್ ಅಸಿಸ್ಟೆಂಟ್, ಆದಾಯ ತೆರಿಗೆ ಇನ್‌ಸ್ಪೆಕ್ಟರ್‌, ತೆರಿಗೆ ಸಹಾಯಕ, ಸಹಾಯಕ ಪ್ರಾಧ್ಯಾಪಕ, ಶಿಕ್ಷಕ, ಗ್ರಂಥಪಾಲಕ, ನರ್ಸ್, ಪ್ರೊಬೇಷನರಿ ಅಧಿಕಾರಿ, ಆಪ್ತ ಸಹಾಯಕ ಮತ್ತು ಎಂಟಿಎಸ್‌ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಗೊಂಡವರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗುತ್ತದೆ.

               ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡವರಿಗೆ 'ಕರ್ಮಯೋಗಿ ಪ್ರಾರಂಭ' ಮೂಲಕ ಆನ್‌ಲೈನ್ ಓರಿಯಂಟೇಶನ್ ತರಬೇತಿಯನ್ನು ಪಡೆಯಲು ಅವಕಾಶ ಇದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries