HEALTH TIPS

2050ರ ವೇಳೆಗೆ ದೇಶದ 90 ಕೋಟಿಯಷ್ಟು ಜನ ನಗರಗಳಲ್ಲಿ ವಾಸಿಸಲಿದ್ದಾರೆ: ಕೇಂದ್ರ ಸಚಿವ

                ವದೆಹಲಿ: 2050ರ ಹೊತ್ತಿಗೆ ದೇಶದಲ್ಲಿ ಸುಮಾರು 85-90 ಕೋಟಿಯಷ್ಟು ಜನ ನಗರ ಪ್ರದೇಶಗಳಲ್ಲಿ ವಾಸಿಸಲಿದ್ದಾರೆ ಎಂದು ಕೇಂದ್ರ ವಸತಿ ಸಚಿವ ಹರ್ದೀಪ್‌ ಸಿಂಗ್ ಪುರಿ ಅವರು ಮಂಗಳವಾರ ಹೇಳಿದರು. ವೇಗವಾಗಿ ಬೆಳೆಯುತ್ತಿರುವ ನಗರ ಪ್ರದೇಶಗಳಲ್ಲಿನ ಜನ ಸಂಖ್ಯೆಯ ಹಿನ್ನೆಲೆಯಲ್ಲಿ‌ ಸಚಿವರು ಈ ಮಾತನ್ನು ಹೇಳಿದ್ದಾರೆ.

                 ಸುದ್ದಿಗಾರರೊಂದಿಗೆ ಹರ್ದೀಪ್ ಅವರು ಮಾತನಾಡಿ, 'ದೇಶದ ನಗರಗಳಲ್ಲಿ ಆಗಬೇಕಾದ ಅಭಿವೃದ್ಧಿಯು ಸವಾಲಿನಿಂದ ಕೂಡಿದೆ. ನಗರೀಕರಣವು ತೀವ್ರಗತಿಯಲ್ಲಿ ಬೆಳೆಯುತ್ತಿದ್ದು, ಪ್ರತಿ ನಿಮಿಷಕ್ಕೆ ಸರಾಸರಿ 20-30 ಜನರು ನಗರ ಪ್ರದೇಶದಲ್ಲಿ ವಾಸಿಸಲು ಬರುತ್ತಿದ್ದಾರೆ' ಎಂದರು.

              ಅಲ್ಲದೇ, 2050ರ ಹೊತ್ತಿಗೆ ದೇಶದ ನಗರಗಳಲ್ಲಿ ವಾಸಿಸುವ ಜನಸಂಖ್ಯೆ 85-90 ಕೋಟಿ ತಲುಪಲಿದೆ ಎಂದು ಹರ್ದೀಪ್ ಅಭಿಪ್ರಾಯ ವ್ಯಕ್ತಪಡಿಸಿದರು.

               ಕೇಂದ್ರ ವಸತಿ ಸಚಿವಾಲಯದ ಪ್ರಕಾರ, ಪಿಎಂಎವೈ-ಅರ್ಬನ್ (PMAY-Urban) ಯೋಜನೆಯಡಿ 1.2 ಕೋಟಿಗೂ ಹೆಚ್ಚು ಮನೆಗಳನ್ನು ಮಂಜೂರು ಮಾಡಲಾಗಿದೆ. ನಗರ ಪ್ರದೇಶಗಳಲ್ಲಿ 1.1 ಕೋಟಿಗೂ ಹೆಚ್ಚು ಅನಾಧಿಕೃತ ಮನೆಗಳನ್ನು ಈಗಾಗಲೇ ನೆಲಸಮಗೊಳಿಸಲಾಗಿದೆ. ಹಾಗೂ, 73.45 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಕಟ್ಟಿಕೊಡಲಾಗಿದೆ ಎಂದು ಸಚಿವರು ತಿಳಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries