HEALTH TIPS

24 ಗಂಟೆಗಳಲ್ಲಿ 5,676 ಸೋಂಕಿತರು ಪತ್ತೆ: ಕೋವಿಡ್‌ ಪ್ರಕರಣಗಳ ಇಳಿಕೆ

 

                 ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ ದೃಢಪಟ್ಟ 5,676 ಪ್ರಕರಣಗಳು ಪತ್ತೆಯಾಗಿವೆ.

              ಹಿಂದಿನ ದಿನಕ್ಕೆ ಹೋಲಿಸಿಕೊಂಡರೆ ಸೋಂಕು ಪ್ರಕರಣಗಳಲ್ಲಿ ತುಸು ಇಳಿಕೆಯಾಗಿದೆ. ಸೋಮವಾರ ದೇಶದಲ್ಲಿ 5,888 ಪ್ರಕರಣಗಳು ಪತ್ತೆಯಾಗಿದ್ದವು.

                    ದೇಶದಲ್ಲಿ 37,093 ರಷ್ಟು ಸಕ್ರಿಯ ಕೋವಿಡ್‌ ಪ್ರಕರಣಗಳಿರುವುದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಗೊತ್ತಾಗಿದೆ. ಕೋವಿಡ್‌ ಹೆಚ್ಚಳದ ಹಿನ್ನೆಲೆಯಲ್ಲಿ ಸೋಮವಾರ ದೇಶದ ಹಲವು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸನ್ನದ್ಧತೆಯನ್ನು ಪರಿಶೀಲಿಸಲು ಅಣಕು ಕಾರ್ಯಾಚರಣೆ ನಡೆಸಲಾಗಿತ್ತು.

                  ದೇಶದಲ್ಲಿ ಕೋವಿಡ್‌ ನಿರಂತರವಾಗಿ ಹೆಚ್ಚಳವಾಗುತ್ತಿರುವುದಕ್ಕೆ ಮೂರು ಮುಖ್ಯ ಕಾರಣಗಳನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬಹಿರಂಗಪಡಿಸಿತ್ತು.

1. ಕೋವಿಡ್‌-19ಗೆ ಸಂಬಂಧಿಸಿದ ಸೂಕ್ತ ನಡವಳಿಕೆಯಲ್ಲಿನ ಸಡಿಲಿಕೆ

2. ಸೋಂಕು ಪತ್ತೆ ಪರೀಕ್ಷೆ ಕಡಿಮೆಯಾಗಿರುವುದು

3. ಕೊರೊನಾ ವೈರಸ್‌ನ ಹೊಸ ರೂಪಾಂತರಿ ತಳಿ... ಸೋಂಕು ಉಲ್ಬಣಕ್ಕೆ ಕಾರಣ ಎನ್ನಲಾಗುತ್ತಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries