HEALTH TIPS

ಸುಖೋಯ್-30 ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ

 

               ತೇಜ್‌ಪುರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ (ಏ.8) ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಹಾರಾಟ ನಡೆಸಿದರು.

            3 ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಇಂದು ಸುಖೋಯ್ ವಿಮಾನದಲ್ಲಿ ಹಾರಾಟ ನಡೆಸಿದರು. ಈ ಕುರಿತ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

             ಮುರ್ಮು ಅವರು ಏ.6ರಂದು ಅಸ್ಸಾಂಗೆ ಭೇಟಿ ನೀಡಿದ್ದು, ನಿನ್ನೆಯಷ್ಟೇ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಗಜ ಉತ್ಸವ-2023 ಅನ್ನು ಉದ್ಘಾಟಿಸಿ ಮಾತನಾಡಿದ್ದರು.

                 ದ್ರೌಪದಿ ಮುರ್ಮು ಅವರು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ 2ನೇ ರಾಷ್ಟ್ರಪತಿಯಾಗಿದ್ದಾರೆ. 2009ರಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸುಖೋಯ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries