HEALTH TIPS

ಮಧ್ಯ‍ಪ್ರದೇಶ: 'ಒಬನ್‌' ಹೆಸರಿನ ಚೀತಾ ಪತ್ತೆ, ಕುನೊ ಉದ್ಯಾನವನಕ್ಕೆ ವಾಪಸ್

 

                ಶಿಯೋಪುರ್: ಕುನೊ ರಾಷ್ಟ್ರೀಯ ಉದ್ಯಾನವನದ ಗಡಿಯಿಂದ ತಪ್ಪಿಸಿಕೊಂಡಿದ್ದ 'ಒಬನ್‌' ಹೆಸರಿನ ಚೀತಾ ಪತ್ತೆಯಾಗಿದ್ದು, ವಾಪಸ್‌ ಉದ್ಯಾನವನಕ್ಕೆ ಬಿಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

                ನಮೀಬಿಯಾದಿಂದ ತರಲಾದ ಗಂಡು ಚೀತಾಗಳಲ್ಲಿ ಒಂದಾದ 'ಒಬನ್‌' ಐದು ದಿನಗಳ ಹಿಂದೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಸಮೀಪದ ಹಳ್ಳಿಯೊಂದರಲ್ಲಿ ಕಾಣಿಸಿಕೊಂಡಿತ್ತು.

ಬಳಿಕ ಕಾರ್ಯಾಚರಣೆ ನಡೆಸಿ ಶಿವಪುರಿ ಜಿಲ್ಲೆಯ ಅರಣ್ಯದಲ್ಲಿ ಚೀತಾವನ್ನು ರಕ್ಷಿಸಲಾಗಿದೆ.

                'ಶಿವಪುರಿ ಜಿಲ್ಲೆಯ ಗಡಿಯಲ್ಲಿರುವ ಬೈರಾದ್ ಗ್ರಾಮದ ಸಮೀಪವಿರುವ ಅರಣ್ಯ ಪ್ರದೇಶದಕಲ್ಲಿ ಸಂಜೆ 4 ಗಂಟೆ ಸುಮಾರಿಗೆ ಚೀತಾ ಸಿಕ್ಕಿಬಿದ್ದಿದ್ದು, ಕುನೊ ರಾಷ್ಟ್ರೀಯ ಉದ್ಯಾನವನದ ಪಾಲ್ಪುರ ಅರಣ್ಯಕ್ಕೆ ಬಿಡಲಾಗಿದೆ' ಎಂದು ಕುನೊ ವನ್ಯಜೀವಿ ವಿಭಾಗದ ಜಿಲ್ಲಾ ಅರಣ್ಯ ಅಧಿಕಾರಿ (ಡಿಎಫ್‌ಒ) ಪ್ರಕಾಶ್ ಕುಮಾರ್ ವರ್ಮಾ ತಿಳಿಸಿದ್ದಾರೆ.

                  ಕಳೆದ ವರ್ಷ ಸೆಪ್ಟೆಂಬರ್ 17ರಂದು ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತರಲಾದ ಎಂಟು ಚಿರತೆಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries