ನವದೆಹಲಿ: ಕೇರಳ ಹೈಕೋರ್ಟ್‍ನ ಹಿರಿಯ ನ್ಯಾಯಮೂರ್ತಿ ಆಂಧ್ರ ಮೂಲದ ನ್ಯಾಯಮೂರ್ತಿ ಸರಸಾ ವೆಂಕಟನಾರಾಯಣ ಭಟ್ಟಿ ಅವರನ್ನು ಕೇರಳ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.
ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ಶಿಫಾರಸನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಅವರ ನಿವೃತ್ತಿಯ ತೆರವಾದ ಸ್ಥಾನಕ್ಕೆ ನ್ಯಾಯಮೂರ್ತಿ ಭಟ್ಟಿ ಅವರನ್ನು ನೇಮಿಸುವಂತೆ ಕೊಲಿಜಿಯಂ ಶಿಫಾರಸು ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ನಂತರ ಕೇರಳ ಹೈಕೋರ್ಟ್‍ನ ಅತ್ಯಂತ ಹಿರಿಯ ನ್ಯಾಯಮೂರ್ತಿ ಎಸ್.ವಿ. ಭಟ್ಟಿ ಆಗಿದ್ದಾರೆ. ಆಂಧ್ರಪ್ರದೇಶ ಮೂಲದ ನ್ಯಾಯಮೂರ್ತಿ ಭಟ್ಟಿ ಅವರು ಮಾರ್ಚ್ 19, 2019 ರಿಂದ ಕೇರಳ ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅದಕ್ಕೂ ಮುನ್ನ ಅವರು ಆಂಧ್ರಪ್ರದೇಶ ಹೈಕೋರ್ಟ್‍ನಲ್ಲಿ ನ್ಯಾಯಾಧೀಶರಾಗಿದ್ದರು. 1987 ರಿಂದ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದ ನ್ಯಾಯಮೂರ್ತಿ ಭಟ್ಟಿ 2013 ರಲ್ಲಿ ಆಂಧ್ರಪ್ರದೇಶ ಹೈಕೋರ್ಟ್‍ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು.
ಕೊಲಿಜಿಯಂ ಹೊರಡಿಸಿದ ಅಧಿಕೃತ ಹೇಳಿಕೆಯಲ್ಲಿ, ನ್ಯಾಯಮೂರ್ತಿ ಭಟ್ಟಿ ಅವರು ಎರಡು ಹೈಕೋರ್ಟ್‍ಗಳಲ್ಲಿ ಹಿರಿಯ ನ್ಯಾಯಾಧೀಶರಾಗಿ ಅನುಭವವನ್ನು ಪರಿಗಣಿಸಿ ಕೇರಳ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಪರಿಗಣಿಸಲಾಗಿದೆ.
ಪ್ರಸ್ತುತ, ಆಂಧ್ರ ಹೈಕೋರ್ಟ್‍ನ ಯಾವುದೇ ನ್ಯಾಯಾಧೀಶರು ದೇಶದ ಹೈಕೋರ್ಟ್‍ಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿಲ್ಲ. ಇದನ್ನು ಪರಿಗಣಿಸಿ ನ್ಯಾಯಮೂರ್ತಿ ಎಸ್.ವಿ. ಭಟ್ಟಿ ಅವರನ್ನು ಕೇರಳ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.
ಕೇರಳ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಎಸ್.ವಿ. ಭಟ್ಟಿ ಅವರನ್ನು ಶಿಫಾರಸು ಮಾಡಿದ ಸುಪ್ರೀಂ ಕೊಲಿಜಿಯಂ
0
ಏಪ್ರಿಲ್ 20, 2023





