HEALTH TIPS

ದೇಶದ ಅಗತ್ಯ ಪರಿಗಣಿಸಿ ಎನ್‌ಇಪಿ ಜಾರಿ: ಮೋದಿ

 

               ಭೋಪಾಲ್ (PTI): ಆಧುನಿಕ ಮತ್ತು ಅಭಿವೃದ್ಧಿ ಹೊಂದಿದ ದೇಶದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

                      ಹೊಸದಾಗಿ ನೇಮಕಗೊಂಡ ಶಿಕ್ಷಕರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಮೋದಿ ಅವರು ನೀಡಿರುವ ವಿಡಿಯೊ ಸಂದೇಶದಲ್ಲಿ ಈ ವಿಷಯ ತಿಳಿಸಿದ್ದಾರೆ.

                     ಈ ನೀತಿಯು ಮಕ್ಕಳ ಸಮಗ್ರ ಅಭಿವೃದ್ಧಿ, ಜ್ಞಾನ, ಕೌಶಲ, ಸಂಸ್ಕೃತಿ ಮತ್ತು ಭಾರತೀಯ ಮೌಲ್ಯಗಳ ಉತ್ತೇಜನಕ್ಕೆ ಒತ್ತು ನೀಡುತ್ತದೆ ಎಂದರು.

                    ಮಧ್ಯಪ್ರದೇಶದಲ್ಲಿ ಯುವಕರಿಗೆ ಸರ್ಕಾರಿ ಉದ್ಯೋಗ ಒದಗಿಸುವ ಅಭಿಯಾನ ವೇಗವಾಗಿ ನಡೆಯುತ್ತಿದೆ. ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಆಯೋಜಿಸುವ ಮೂಲಕ ಸಾವಿರಾರು ಜನರನ್ನು ವಿವಿಧ ಹುದ್ದೆಗಳಿಗೆ ನೇಮಕ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

                     ಶಿಕ್ಷಕರ ಹುದ್ದೆಗೆ 22,400 ಕ್ಕೂ ಹೆಚ್ಚು ಯುವಕರನ್ನು ನೇಮಕ ಮಾಡಲಾಗಿದೆ. ಎನ್‌ಇಪಿಯ ಪರಿಣಾಮಕಾರಿ ಅನುಷ್ಠಾನದಲ್ಲಿ ಶಿಕ್ಷಕರ ಪ್ರಮುಖ ಪಾತ್ರದ ಬಗ್ಗೆ ವಿವರಿಸಿ‌ದ ಮೋದಿ, ಮಧ್ಯಪ್ರದೇಶದಲ್ಲಿ ಶಿಕ್ಷಕರ ನೇಮಕಾತಿ ಅಭಿಯಾನವು ಈ ದಿಕ್ಕಿನಲ್ಲಿ ಒಂದು ದೊಡ್ಡ ಹೆಜ್ಜೆಯಾಗಿದೆ ಎಂದು ಹೇಳಿದರು.

               ನೇಮಕಗೊಂಡಿರುವ ಸುಮಾರು ಅರ್ಧದಷ್ಟು ಶಿಕ್ಷಕರನ್ನು ಬುಡಕಟ್ಟು ಪ್ರದೇಶಗಳಲ್ಲಿ ನಿಯೋಜಿಸಲಾಗುವುದು. ಇದು ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಮೋದಿ ಮಾಹಿತಿ ನೀಡಿದರು.

                ಮಧ್ಯಪ್ರದೇಶ ಸರ್ಕಾರ ಈ ವರ್ಷ 60,000 ಶಿಕ್ಷಕರು ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ನೇಮಕಾತಿ ಮಾಡುವ ಗುರಿ ನಿಗದಿಪಡಿಸಿದೆ. ರಾಷ್ಟ್ರೀಯ ಸಾಧನೆ ಸಮೀಕ್ಷೆಯಲ್ಲಿ (ಎನ್‌ಎಎಸ್) ರಾಜ್ಯವು ಶಿಕ್ಷಣದ ಗುಣಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.

                  ಪ್ರಧಾನ ಮಂತ್ರಿ ಕೌಶಲ ವಿಕಾಸ್ ಯೋಜನೆ ಅಡಿ ಯುವಕರಿಗೆ ತರಬೇತಿ ನೀಡಲು ದೇಶದಾದ್ಯಂತ ಕೌಶಲ ಅಭಿವೃದ್ಧಿ ಕೇಂದ್ರ ತೆರೆಯಲಾಗಿದೆ. ಈ ವರ್ಷದ ಬಜೆಟ್‌ನಲ್ಲಿ 30 ಕೌಶಲ ಭಾರತ ಅಂತರರಾಷ್ಟ್ರೀಯ ಕೇಂದ್ರ ತೆರೆಯಲಾಗುವುದು. ಅಲ್ಲಿ ಯುವಕರಿಗೆ ನವಯುಗ ತಂತ್ರಜ್ಞಾನದ ಮೂಲಕ ತರಬೇತಿ ನೀಡಲಾಗುವುದು ಎಂದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries