ಮುಳ್ಳೇರಿಯ: ಬೆಳ್ಳೂರು ಗ್ರಾಮ ಪಂಚಾಯತಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ರಾಜ್ಯ ಸರ್ಕಾರದ ಆದ್ರ್ರಾ ಯೋಜನೆಗೊಳಪಡಿಸಿ ಕುಟುಂಬ ಆರೋಗ್ಯ ಕೇಂದ್ರವನ್ನಾಗಿ ಭಡ್ತಿಗೊಳಿಸಿದ ಯೋಜನೆಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್ ಲೈನ್ ಮೂಲಕ ಉದ್ಘಾಟಿಸಿದರು. ಆರೋಗ್ಯ ಸಚಿವೆ ವೀಣಾ ಜಾರ್ಜ್ ಸಭೆಯ ಅಧ್ಯಕ್ಷತೆವಹಿಸಿದ್ದರು.
ಈ ಸಂದರ್ಭ ಬೆಳ್ಳೂರು ಗ್ರಾ.ಪಂ. ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಜಯಕುಮಾರ್, ಅಭಿವೃದ್ಧಿ ಕಾರ್ಯಗಳ ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರಶೇಖರ ರೈ, ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಎಂ.ಸುಜಾತಾ ರೈ, ಜಿಲ್ಲಾ ಪಂಚಾಯಿತಿ ಸದಸ್ಯೆ ಶೈಲಜಾ ಭಟ್, ಬ್ಲಾಕ್ ಪಂಚಾಯಿತಿ ಸದಸ್ಯೆ ಎ.ಯಶೋದಾ, ಪಂಚಾಯಿತಿ ಸದಸ್ಯರಾದ ಬಿ.ಎನ್.ಗೀತಾ, ಬೇಬಿ, ಎಚ್.ಬಿ.ವೀರೇಂದ್ರ. ಕುಮಾರ್, ಆರ್.ಐ.ಭಾಗೀರಥಿ, ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳಾದ ಕೆ.ಎಚ್.ಸೂಪಿ, ಎನ್.ಎಚ್.ಮಹಮ್ಮದ್ ಹಾಜಿ, ಉಪ ಆರ್. ಡಿಎಂಒ ಮತ್ತು ಎಲ್‍ಎಸ್‍ಜಿಡಿ ಡಾ.ರವಿಪ್ರಸಾದ ಮತ್ತು ಡಾ.ಅಖಿಲ್ ಮಾತನಾಡಿದರು. ಪಂಚಾಯಿತಿ ಅಧ್ಯಕ್ಷ ಎಂ.ಶ್ರೀಧರ ಸ್ವಾಗತಿಸಿ, ಕುಟುಂಬ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ರೀಷ್ಮಾ ನಂದಿ ವಂದಿಸಿದರು.




.jpg)
.jpg)
