HEALTH TIPS

ಜಾರ್ಖಂಡ್‌: ಗುಂಡಿನ ಕಾಳಗದಲ್ಲಿ ಐವರು ನಕ್ಸಲರ ಹತ್ಯೆ

 

               ಜಾರ್ಖಂಡ್ (PTI): ಛತ್ರಾ ಜಿಲ್ಲೆಯ ಲಲಾಂಗ್‌ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ಮಧ್ಯೆ ಸೋಮವಾರ ನಡೆದ ಭಾರಿ ಗುಂಡಿನ ಚಕಮಕಿಯಲ್ಲಿ ಐದು ಮಂದಿ ನಕ್ಸಲರು ಮೃತಪಟ್ಟಿದ್ದಾರೆ.

                   ರಾಜಧಾನಿ ರಾಂಚಿಯಿಂದ 160 ಕಿ.ಮೀ ದೂರದಲ್ಲಿರುವ ಲಾಲಾಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಛತ್ರಾ-ಪಲಮು ಗಡಿಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ.ಘಟನೆಯಲ್ಲಿ ಐವರು ನಕ್ಸಲರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

                     ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಕಾರ್ಯಾಚರಣೆ ನಡೆಸಲಾಗಿತ್ತು. ಈ ಪ್ರದೇಶದಲ್ಲಿ ನಕ್ಸಲರು ಹೆಚ್ಚಿನ ಸಂಖ್ಯೆಯಲ್ಲಿ ಅಡಗಿರುವ ಶಂಕೆ ವ್ಯಕ್ತವಾಗಿದ್ದು ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.

                 ಘಟನಾ ಸ್ಥಳದಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳಲ್ಲಿ ಎರಡು ಎಕೆ -47 ಗನ್‌ಗಳು, ನಾಡ ಪಿಸ್ತೂಲುಗಳು ಸೇರಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries Qries//