ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಹೊತ್ತು, ಖ್ಯಾತನಾಮ ಕುಸ್ತಿಪಟುಗಳ ಪ್ರತಿಭಟನೆ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ನ ಅಧ್ಯಕ್ಷ, ಬಿಜೆಪಿ ಸಂಸದರೂ ಆಗಿರುವ ಬ್ರಿಜ್‌ಭೂಷಣ್ ಶರಣ್ ಸಿಂಗ್, ತಾವು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
0
samarasasudhi
ಏಪ್ರಿಲ್ 29, 2023
ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಹೊತ್ತು, ಖ್ಯಾತನಾಮ ಕುಸ್ತಿಪಟುಗಳ ಪ್ರತಿಭಟನೆ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ನ ಅಧ್ಯಕ್ಷ, ಬಿಜೆಪಿ ಸಂಸದರೂ ಆಗಿರುವ ಬ್ರಿಜ್‌ಭೂಷಣ್ ಶರಣ್ ಸಿಂಗ್, ತಾವು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಮ್ಮ ತವರು ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಅವರು, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರ ಅಭಿಮಾನಿಗಳು ಹೂ ಮಾಲೆ ಹಾಕಿ ಸ್ವಾಗತಿಸಿದರು.
'ಹುದ್ದೆಗೆ ರಾಜೀನಾಮೆ ನೀಡುವುದು ದೊಡ್ಡ ವಿಷಯವೇನಲ್ಲ. ಆದರೆ ನಾನು ಹಾಗೆ ಮಾಡುವುದಿಲ್ಲ. ಯಾಕೆಂದರೆ ನಾನು ಕ್ರಿಮಿನಲ್ ಅಲ್ಲ. ಕುಸ್ತಿಪಟುಗಳ ಬೇಡಿಕೆ ಆಗಾಗ ಬದಲಾಗುತಿದೆ. ಮೊದಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಳಿದರು. ಒಂದು ವೇಳೆ ನಾಣು ರಾಜೀನಾಮೆ ನೀಡಿದರೆ ನನ್ನ ಮೇಲಿನ ಆರೋಪ ಒಪ್ಪಿಕೊಂಡಂತೆ' ಎಂದು ಅವರು ಹೇಳಿದರು.
ಈ ಪ್ರಕರಣದಲ್ಲಿ ತಾವು ನಿರಪರಾಧಿ ಎಂದು ಪ್ರತಿಪಾದಿಸಿದ ಅವರು, ಎಲ್ಲಾ ತನಿಖೆಗೂ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾರೆ.
'ಕಳೆದ ನಾಲ್ಕು ತಿಂಗಳಿನಿಂದ ನಾನು ಆರೋಪ ಎದುರಿಸುತ್ತಿದ್ದೇನೆ. ಇದು ನಮ್ಮ ಕುಟುಂಬ ಹಾಗೂ ಬೆಂಬಲಿಗರಿಗೆ ನೋವುಂಟು ಮಾಡಿದೆ. ಅವರು ನನ್ನ ವಿರುದ್ಧ ಜನರನ್ನು ಎತ್ತಿ ಕಟ್ಟಿದರು. ನನ್ನ ವಿರುದ್ಧ ಆರೋಪ ಮಾಡಲು ಜನರನ್ನು ಕರೆತಂದರು. ನಾನು ಯಾವಾಗಲೂ ಸರ್ಕಾರವನ್ನು ಗೌರವಿಸುತ್ತೇನೆ. ನಾನು ಜೈಲಲ್ಲಿ ಇರಬೇಕು ಎಂದು ಅವರು ಹೇಳುತ್ತಾರೆ' ಎಂದು ಅವರು ನುಡಿದರು.