ಕಾಸರಗೋಡು: ಜಿಲ್ಲೆಯಲ್ಲಿ ಎಂಟು ಆರೋಗ್ಯ ಕೇಂದ್ರಗಳನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಆನ್‍ಲೈನ್ ಮೂಲಕ ಉದ್ಘಾಟಿಸಿದರು.
ರಾಜ್ಯ ಆರೋಗ್ಯ ಖಾತೆ ಸಚಿವೆ ವೀಣಾ ಜಾರ್ಜ್ ಅಧ್ಯಕ್ಷತೆ ವಹಿಸಿದ್ದರು. ಬಾಯಾರು, ಪಳ್ಳಿಕ್ಕೆರೆ, ಬೆಳ್ಳೂರು, ಮಾವಿಲ ಕಡಪುರ, ಮಧೂರು, ಅಡೂರು, ಆರಿಕ್ಕಾಡಿ ಮತ್ತು ಪೆರ್ಲ ಕುಟುಂಬ ಆರೋಗ್ಯ ಕೇಂದ್ರಗಳನ್ನು ಮುಖ್ಯಮಂತ್ರಿ ಉದ್ಘಾಟಿಸಿದರು. ನವ ಕೇರಳ ಕ್ರಿಯಾ ಯೋಜನೆಯ ಎರಡನೇ ಹಂತದಲ್ಲಿ, ಆದ್ರ್ರಔ ಮಿಷನ್ ಅಡಿಯಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನವೀಕರಿಸಿ ಕುಟುಂಬ ಆರೋಗ್ಯ ಕೇಂದ್ರಗಳಾಗಿ ಪರಿವರ್ತಿಸಲಾಗಿದೆ.
ಜಿಲ್ಲೆಯಲ್ಲಿ ಎಂಟು ಆರೋಗ್ಯ ಕೇಂದ್ರಗಳ ಉದ್ಘಾಟನೆ
0
ಏಪ್ರಿಲ್ 17, 2023
Tags




