HEALTH TIPS

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ: ಅಮೆರಿಕ

 

                ವಾಷಿಂಗ್ಟನ್ : ಅರುಣಾಚಲ ಪ್ರದೇಶವನ್ನು ಸುಧೀರ್ಘ ಕಾಲದಿಂದಲೂ ಭಾರತದ ಅವಿಭಾಜ್ಯ ಅಂಗವೆಂದು ಅಮೆರಿಕ ಗುರುತಿಸಿದೆ ಮತ್ತು ಪ್ರದೇಶಗಳನ್ನು ಮರುನಾಮಕರಣ ಮಾಡುವ ಮೂಲಕ ಪ್ರಾದೇಶಿಕ ಹಕ್ಕುಗಳನ್ನು ಸಾಧಿಸುವ ಯಾವುದೇ ಏಕಪಕ್ಷೀಯ ಪ್ರಯತ್ನಗಳನ್ನು ಬಲವಾಗಿ ವಿರೋಧಿಸುತ್ತದೆ ಎಂದು ಶ್ವೇತಭವನ ಹೇಳಿದೆ.

                  ಅರುಣಾಚಲ ಪ್ರದೇಶದ 11 ಸ್ಥಳಗಳನ್ನು ಮರು ನಾಮಕರಣಗೊಳಿಸುವ ಮೂಲಕ ಅವುಗಳ ಮೇಲೆ ಹಕ್ಕು ಸಾಧಿಸುವ ಚೀನಾದ ಪ್ರಯತ್ನಗಳನ್ನು ಅಮೆರಿಕ ಬಲವಾಗಿ ವಿರೋಧಿಸುತ್ತದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರೆಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

               ಭಾರತ-ಅಮೆರಿಕ ನಡುವಿನ ಸಂಬಂಧವು ವಿಶ್ವದಲ್ಲಿ ಚಾಲ್ತಿಯಲ್ಲಿರುವ ಅತ್ಯಂತ ಪರಿಣಾಮಕಾರಿ ಸಂಬಂಧಗಳಲ್ಲಿ ಒಂದಾಗಿದೆ. ಉದಯೋನ್ಮುಖ ಮತ್ತು ನಿರ್ಣಾಯಕ ತಂತ್ರಜ್ಞಾನಗಳಲ್ಲಿ ಭಾರತದೊಂದಿಗೆ ನಮ್ಮ ಸಹಕಾರವನ್ನು ಗಾಢವಾಗಿಸಲು, ನಮ್ಮ ರಕ್ಷಣಾ ಸಹಕಾರವನ್ನು ವಿಸ್ತರಿಲು, ಆರ್ಥಿಕ, ಜನರ ನಡುವಿನ ಸಂಬಂಧವನ್ನು ಬಲಪಡಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವನ್ನು ಭಾರತದಲ್ಲಿನ ನಮ್ಮ ರಾಯಭಾರಿ ಮುನ್ನಡೆಸುತ್ತಿದ್ದಾರೆ ಎಂದು ಕರೀನ್ ಜೀನ್-ಪಿಯರೆ ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries