ದಮನ್: ಕೇಂದ್ರಾಡಳಿತ ಪ್ರದೇಶಗಳಾದ ದಾದ್ರಾ ಮತ್ತು ನಗರಹವೇಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಮೋ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದರು.
0
samarasasudhi
ಏಪ್ರಿಲ್ 26, 2023
ದಮನ್: ಕೇಂದ್ರಾಡಳಿತ ಪ್ರದೇಶಗಳಾದ ದಾದ್ರಾ ಮತ್ತು ನಗರಹವೇಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಮೋ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದರು.
ಕೇರಳ ಪ್ರವಾಸದಲ್ಲಿದ್ದ ಅವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ದಾದ್ರಾ ಮತ್ತು ನಗರಹವೇಲಿಯ ಸಿಲ್ವಾಸಾ ನಗರದಲ್ಲಿ ನಮೋ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯನ್ನು ಮೋದಿ ಉದ್ಘಾಟಿಸಿದರು. ಇದು ಕೇಂದ್ರಾಡಳಿತ ಪ್ರದೇಶದ ಮೊದಲ ವೈದ್ಯಕೀಯ ಕಾಲೇಜು ಆಗಿದೆ.
ಇದೇ ಸಂದರ್ಭದಲ್ಲಿ ಅವರು ಕಾಲೇಜು ಆವರಣವನ್ನು ಪರಿಶೀಲಿಸಿದರು. ಹಾಗೂ ಕಾಲೇಜು ಕಟ್ಟಡ ನಿರ್ಮಿಸಿದ ಕಾರ್ಮಿಕರ ಜೊತೆ ಮಾತುಕತೆ ನಡೆಸಿದರು. ಈ ವೈದ್ಯಕೀಯ ಕಾಲೇಜು ಸಂಕೀರ್ಣವನ್ನು ₹203 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.