ಕಾಸರಗೋಡು: 'ನನ್ನ ಕೇರಳ-2023' ಪ್ರದರ್ಶನ ಮತ್ತು ಮಾರುಕಟ್ಟೆ ಪ್ರದರ್ಶನ ಅಂಗವಾಗಿ ಜಿಲ್ಲಾ ವಾರ್ತಾ ಮತ್ತು ಮಾಹಿತಿ ಕಚೇರಿ ವತಿಯಿಂದ ಚಿತ್ರಕಲೆ ಸ್ಪರ್ಧೆಯನ್ನು (ಜಲವರ್ಣ) ಆಯೋಜಿಸಲಾಗುತ್ತಿದೆ.
ಐದರಿಂದ ಹತ್ತು ವರ್ಷದೊಳಗಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಪಂದ್ಯವು ನೀಲೇಶ್ವರದ ರಾಜಾಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಏ.13 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಏಪ್ರಿಲ್ 12 ರೊಳಗೆ prdcontest@gmail.com ನಲ್ಲಿ ನೋಂದಾಯಿಸಿಕೊಳ್ಳಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಾಹಿತಿ ಕಛೇರಿ ದೂರವಾಣಿ ಸಂಖ್ಯೆ(04994 255145)ಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
PRD ವತಿಯಿಂದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ
0
ಏಪ್ರಿಲ್ 10, 2023
Tags




