ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸ್ವಾಮೀಜಿ ಹೈಯರ್ ಸೆಕೆಂಡರಿ ಶಾಲೆಯ ಎಸ್ ಎಸ್ ಎಲ್ ಸಿ 2022-23 ಸಾಲಿನ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, 100 ಶೇ. ಫಲಿತಾಂಶ ದಾಖಲಿಸಿ ಯಶಸ್ಸು ದಾಖಲಿಸಿದೆ. 44 ಮಂದಿ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ವಿದ್ಯಾರ್ಥಿಗಳ ಫಲಿತಾಂಶಕ್ಕೆ ಶಾಲಾ ಪ್ರಬಂಧಕ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಶುಭಹಾರೈಸಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯನಿ, ಆಧ್ಯಾಪಕ, ಸಿಬ್ಬಂದಿ ವರ್ಗ ಮಕ್ಕಳಿಗೆ ಶುಭ ಹಾರೈಸಿದ್ದಾರೆ.