ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,961 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 30,041ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
0
samarasasudhi
ಮೇ 06, 2023
ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,961 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 30,041ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಈವರೆಗೆ ದೇಶದಲ್ಲಿ ಒಟ್ಟು 4,49,67,250 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಇದೇ ವೇಳೆ ದೇಶದಾದ್ಯಂತ 4,44,05,550 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.07ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.75 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ದೈನಂದಿನ ಮರಣ ಪ್ರಮಾಣ ಶೇ 1.18ರಷ್ಟಿದೆ. ಸಚಿವಾಲಯದ ವೆಬ್ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.